ಗುರುವಾರ , ಸೆಪ್ಟೆಂಬರ್ 24, 2020
27 °C

ಚಾಮರಾಜನಗರ ಜಿಲ್ಲೆಯಲ್ಲಿ ಮುಂದುವರೆದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯೂ ಮಳೆಯಾಗಿದೆ. ಸೋಮವಾರಕ್ಕೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆಯಾಗಿದೆ. 

ಬುಧವಾರ ಬೆಳಿಗ್ಗೆ 8.30ರವರೆಗೆ ಜಿಲ್ಲೆಯಾದ್ಯಂತ 1.4 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 2.5 ಸೆಂ.ಮೀ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 1.7 ಸೆಂ.ಮೀ, ಕೊಳ್ಳೇಗಾಲದಲ್ಲಿ 1.1 ಸೆಂ.ಮೀ, ಯಳಂದೂರು ತಾಲ್ಲೂಕಿನಲ್ಲಿ 1.5 ಸೆಂ.ಮೀ ಹಾಗೂ ಹನೂರು ತಾಲ್ಲೂಕಿನಲ್ಲಿ 0.6 ಸೆಂ.ಮೀ ಮಳೆಯಾಗಿದೆ. 

ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ. ಚಂದಕವಾಡಿ ಹೋಬಳಿ, ಹರದನಹಳ್ಳಿ ಹೋಬಳಿಗಳಲ್ಲಿ 3.5 ಸೆಂ.ಮೀ ಹಾಗೂ 3.2 ಸೆಂ.ಮೀ ಮಳೆ ಬಿದ್ದಿದೆ. 

ಜಿಲ್ಲೆಗೆ ಸಂಬಂಧಿಸಿದಂತೆ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಿಸಿದೆ. ಮುನ್ಸೂಚನೆ ಪ್ರಕಾರ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. 

ಕಳೆದ ವಾರಾಂತ್ಯದಿಂದ ಜಿಲ್ಲೆಯಾದ್ಯಂತ ಹಗಲು ಹೊತ್ತಿನಲ್ಲಿ ಬಿಸಿಲಿನ ವಾತಾವರಣ ಕಂಡು ಬರುತ್ತಿದ್ದು, ಸಂಜೆಯ ನಂತರ ಮೋಡ ಕವಿದು ರಾತ್ರಿ ಮಳೆಯಾಗುತ್ತಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು