ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ ತಾಲ್ಲೂಕಿನಲ್ಲಿ ಮಳೆ

Published 18 ಮೇ 2024, 14:10 IST
Last Updated 18 ಮೇ 2024, 14:10 IST
ಅಕ್ಷರ ಗಾತ್ರ

ಚಾಮರಾಜನಗರ: ನಗರ ಸೇರಿದಂತೆ ತಾಲ್ಲೂಕು ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. 

ಮಧ್ಯಾಹ್ನ ಒಂದು ಗಂಟೆಗೆ ಶುರುವಾದ ವರ್ಷಧಾರೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. 

ಆಲೂರು, ಕೂಡ್ಲೂರು, ಮಾದಾಪುರ, ಹರದನಹಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳಿಗ್ಗೆಯಿಂದಲೂ ಬಿಸಿಲಿನ ವಾತಾವರಣ ಇತ್ತು. ಮಧ್ಯಾಹ್ನ 12.30ರ ನಂತರ ಏಕಾಏಕಿ ಮೋಡ ಕವಿದು ಮಳೆಯಾಯಿತು. 

ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಸಂಜೆಯವರೆಗೂ ಮೋಡ ಕವಿದ ವಾತಾವರಣ ಇತ್ತು. ಸಂಜೆ ಸಂತೇಮರಹಳ್ಳಿ ಹೋಬಳಿ, ಯಳಂದೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT