ಸೋಮವಾರ, ಮೇ 10, 2021
21 °C

ಹನೂರು: ‌ಮಳೆಗೆ ಧರೆಗುರುಳಿದ ಮರ, ಹಾರಿ ಹೋದ ಮನೆಯ ಮೇಲ್ಚಾವಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮನೆಯ ಮೇಲ್ಚಾವಣಿ ಹಾರಿ ಹೋಗಿರುವುದು

ಹನೂರು: ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕೆಲವು ಕಡೆ  ಮರಗಳು ಧರೆಗುರಳಿದರೆ ಮತ್ತೆ ಕೆಲವು ಕಡೆ ಮನೆಯ ಮೇಲ್ಚಾವಣಿ ಹಾರಿ ಹೋಗಿವೆ.

ರಾಮಾಪುರದಲ್ಲಿ ಶುಕ್ರವಾರ ಬೀಸಿದ ಗಾಳಿಗೆ ಠಾಣೆಯ ಆವರಣದಲ್ಲಿದ್ದ ಬೃಹತ್ ಮರವೊಂದು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  

ಕೌದಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಸುನೀತಾ ಎಂಬುವವರ ಮನೆ ಶುಕ್ರವಾರ ಬೀಸಿದ ಗಾಳಿಗೆ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯ ಒಳಗಿದ್ದವರು ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇದ್ದ ಒಂದು ಮನೆಯು ಗಾಳಿ ಹೊಡೆತಕ್ಕೆ ಸಿಲುಕಿ ಹಾಳಾಗಿದೆ ಕೂಡಲೇ ಸಂಬಂಧಪಟ್ಟ ಇಲಾಖೆ ಪರಿಹಾರ ನೀಡಬೇಕು ಎಂದು ಸುನಿತಾ ಒತ್ತಾಯಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು