ಸಂತೇಮರಹಳ್ಳಿ: ಹೋಬಳಿಯಾದ್ಯಂತ ಬುಧವಾರ ರಾತ್ರಿ ಸಾಧಾರಣವಾಗಿ ಮಳೆ ಸುರಿದಿದೆ. ಒಂದು ಗಂಟೆಗಳ ಕಾಲ ಸುರಿದ ಮಳೆಗೆ ಭೂಮಿ ಹದಗೊಂಡ ಹಿನ್ನೆಲೆಯಲ್ಲಿ ರೈತರು ವ್ಯವಸಾಯ ಆರಂಭಿಸುವುದರ ಜೊತೆಗೆ ಬಿತ್ತನೆ ಬೀಜ ಖರೀದಿಗಾಗಿ ರೈತಸಂಪರ್ಕ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ.

ಹೋಬಳಿಗೆ ಸೇರಿದ ಕೆಲವು ಗ್ರಾಮಗಳಲ್ಲಿ ಸಾಧಾರಣವಾಗಿ ಮಳೆ ಬಂದಿದೆ. ರಾತ್ರಿ ಸುರಿದ ಮಳೆಗೆ ರೈತರು ಜಮೀನುಗಳತ್ತ ತೆರಳಿ ವ್ಯವಸಾಯ ಆರಂಬಿಸುತ್ತಿದ್ದಾರೆ.

ಸಂತೇಮರಹಳ್ಳಿಯ ರೈತಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಖರೀದಿಗಾಗಿ ರೈತರು ಸಾಲು ನಿಂತಿರುವುದು ಕಂಡು ಬಂತು. ಮುಂಗಾರು ಹಂಗಾಮು ಬಿತ್ತನೆ ಬೀಜಗಳಾದ ಉದ್ದು, ಸೂರ್ಯಕಾಂತಿ, ಅಲಸಂದೆ ಹಾಗೂ ಹಸರು ಬಿತ್ತನೆ ಬೀಜಗಳನ್ನು ಖರೀದಿಸುತ್ತಿದ್ದಾರೆ.

ರಿಯಾಯಿತಿ ದರದಲ್ಲಿ 5 ಕೆಜಿ ತೂಕವಿರುವ ಉದ್ದು ₹660, ಸೂರ್ಯಕಾಂತಿ ₹1720, ಅಲಸಂದೆ ₹530, ಹೆಸರು ₹805 ರಂತೆ ದೊರಕುತ್ತಿದೆ. ರೈತರು ಆರ್ ಟಿಸಿ ಹಾಗೂ ಆಧಾರ್ ಕಾರ್ಡ್ ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಜಾತಿ ಪ್ರಮಾಣ ಪತ್ರ, ಆರ್ ಟಿಸಿ ಹಾಗೂ ಆಧಾರ್ ಕಾರ್ಡ್ ನೀಡಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬಹುದು ಎಂದು ಕೃಷಿ ಅಧಿಕಾರಿಗಳು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.