ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾಗಿ ಎಂ.ರಾಮಚಂದ್ರ ಅಧಿಕಾರ ಸ್ವೀಕಾರ

Last Updated 27 ನವೆಂಬರ್ 2020, 16:08 IST
ಅಕ್ಷರ ಗಾತ್ರ

ಚಾಮರಾಜನಗರ: ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಎಂ.ರಾಮಚಂದ್ರ ಅವರು ಬೆಂಗಳೂರಿನ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ್ ಅವರು ಅಧಿಕಾರ ಹಸ್ತಾಂತರಿಸಿದರು.ಪಕ್ಷದ ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ಮುಖಂಡರು, ಹಿತೈಷಿಗಳು ಹಾಗೂ ಸಮಿತಿಯ ಅಧಿಕಾರಿಗಳು ರಾಮಚಂದ್ರ ಅವರನ್ನು ಅಭಿನಂದಿಸಿದರು.

ನಂತರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನನ್ನ ಮೇಲೆ ವಿಶ್ವಾಸವಿಟ್ಟು, ಕೇಂದ್ರ ಪರಿಹಾರ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ತುಂಬಾ ಸಂತಸ ತಂದಿದೆ. ಈ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸಿ ನಿಗಮ ಅಭಿವೃದ್ದಿ ಪಡಿಸಿ ಸರ್ಕಾರಕ್ಕೆ, ಮುಖ್ಯಮಂತ್ರಿಗಳಿಗೆ ಕೀರ್ತಿ ತರುವ ಕೆಲಸ ಮಾಡುತ್ತೇನೆ’ ಎಂದರು.

‘ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಪರಿಹಾರ ಸಮಿತಿ ವತಿಯಿಂದ ನಿರಾಶ್ರಿತರ ಕೇಂದ್ರಗಳನ್ನು ತೆರೆದು ನಿಗಮದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು’ ಎಂದರು.

ಗುಂಡ್ಲುಪೇಟೆ ಶಾಸಕ ನಿರಂಜನ ‌ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಲರಾಜ್, ಕಮಲ್, ನಗರಸಭಾ ಸದಸ್ಯ ರಾಮಸಮುದ್ರ ಸುರೇಶ್, ಮುಖಂಡರಾದಅಯ್ಯನಪುರ ಶಿವಕುಮಾರ್ ಸುರೇಶ್‌ನಾಯಕ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಪ್ರಶಾಂತ್, ರೈತಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಮಿತ್, ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ರಾಮಸಮುದ್ರ ವೇಣುಗೋಪಾಲ್, ಮುಖಂಡರಾದ ನಿಜಗುಣರಾಜು, ಕೂಡ್ಲೂರು ಹನುಮಂತಶೆಟ್ಟಿ, ಕೋಡಿಮೋಳೆ ರಾಜಶೇಖರ್, ಕಾಗಲವಾಡಿ ಶಿವಕುಮಾರ್, ವೀರೇಂದ್ರ ಹಾಗೂ ನಿಗಮದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT