ಮಂಗಳವಾರ, ಸೆಪ್ಟೆಂಬರ್ 28, 2021
20 °C

ರಮೇಶ್ ಜಾರಕಿಹೊಳಿಗೆ ಶೀಘ್ರದಲ್ಲಿ ಸಚಿವ ಸ್ಥಾನ: ಸಚಿವ ನಾರಾಯಣಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮುನಿರತ್ನ ಅವರು ಸಚಿವರಾಗಲಿದ್ದಾರೆ ಎಂದು ಯುವಜನ ಕ್ರೀಡಾ ಮತ್ತು ಸಬಲೀಕರಣ ಸಚಿವ ನಾರಾಯಣ ಗೌಡ ಅವರು ಬುಧವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ರಮೇಶ ಜಾರಕಿಹೊಳಿ ಅವರ ಬಗ್ಗೆ ಗೌರವವಿದೆ. ಅವರ ಮೇಲಿನ ಆರೋಪಗಳು ಕಟ್ಟುಕಥೆ. ಆರೋಪಗಳಿಂದ ಅವರು ಮುಕ್ತರಾಗಲಿದ್ದಾರೆ. ಅವರು ಖಂಡಿತ ಮಂತ್ರಿಯಾಗುತ್ತಾರೆ. ಮುನಿರತ್ನ ಅವರೂ ಸಚಿವರಾಗುತ್ತಾರೆ' ಎಂದರು.

'ಬಾಂಬೆ ಟೀಂ, ಉಳಿದವರು ಎಲ್ಲರೂ ಒಟ್ಟಿಗೆ ಇದ್ದೇವೆ. ಕೆಲವರಿಗೆ ಮಾತ್ರ ಭಿನ್ನಾಭಿಪ್ರಾಯ ಇದೆಯಷ್ಟೇ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಮುಂದಿನ ಚುನಾವಣೆ ಯಡಿಯೂರಪ್ಪ ಅವರ ನೇತೃತ್ವದಲ್ಲೇ ನಡೆಯುತ್ತದೆ' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು