ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಲಲ್ಲಾ ಪ್ರಾಣ ಪ್ರತಿಷ್ಠೆ: ಚಾಮರಾಜನಗರದಲ್ಲಿ ರಾಮತಾರಕ ಹವನ, ಪೂಜೆ

Published 22 ಜನವರಿ 2024, 7:51 IST
Last Updated 22 ಜನವರಿ 2024, 7:51 IST
ಅಕ್ಷರ ಗಾತ್ರ

ಚಾಮರಾಜನಗರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜಿಲ್ಲೆಯಲ್ಲೂ ದೇವಾಲಯಗಳು, ರಾಮಮಂದಿರಗಳಲ್ಲಿ ವಿಶೇಷ ಪೂಜೆಗಳು ನಡೆದವು.

ಶ್ರೀರಾಮ ಭಕ್ತರು ಮನೆಗಳಲ್ಲಿ, ನಗರ, ಪಟ್ಟಣ ಪ್ರದೇಶಗಳ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನ ಭಾವಚಿತ್ರ ಇಟ್ಟು ಪೂಜೆ ಮಾಡಿದ್ದಾರೆ.

ದೇವಾಲಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಬೃಹತ್ ಪರದೆಗಳ ಮೂಲಕ ಅಯೋಧ್ಯೆಯಲ್ಲಿ ನಡೆಯುತ್ತಿರುವ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಚಾಮರಾಜನಗರದ ಶಂಕರಪುರ ಬಡಾವಣೆಯಲ್ಲಿ ಶ್ರೀರಾಮತಾರಕ ಹೋಮ ನಡೆಯುತ್ತಿದ್ದು, ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದಾರೆ. ಅಗ್ರಹಾರ ಬೀದಿಯ ಪಟ್ಟಾಭಿ ರಾಮಮಂದಿರದಲ್ಲೂ ಹೋಮ ಪೂಜೆ ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT