ಕ್ರಮವಾಗಿ ಪಡಿತರ ಸಾಗಾಟ ಹಾಗೂ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿರುವುದರಿಂದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಕ್ರಮ ಪಡಿತರ ದಂಧೆ ಮಟ್ಟಹಾಕಲು ಪೊಲೀಸ್ ಇಲಾಖೆ ಬದ್ಧವಾಗಿದೆ.
–ಬಿ.ಟಿ.ಕವಿತಾ ಎಸ್‌ಪಿ
ಪಡಿತರವನ್ನು ಅರ್ಹರಿಗೆ ತಲುಪಿಸುವ ಕೆಲಸವನ್ನು ಇಲಾಖೆ ಪರಿಣಾಮಕಾರಿಯಾಗಿ ಮಾಡಿದೆ. ಪಡಿತರ ಪಡೆದವರು ಹಣದ ಆಸೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಬಾರದು ಈ ಬಗ್ಗೆ ಇಲಾಖೆಯಿಂದಲೂ ಜಾಗೃತಿ ಮೂಡಿಸಲಾಗುವುದು. ಎಲ್ಲೆಡೆ ದಾಳಿ ಚುರುಕುಗೊಳಿಸಲಾಗುವುದು
ಯೋಗಾನಂದ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ
ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರ ಪಡಿತರ ಕಾರ್ಡ್ ರದ್ದುಗೊಳಿಸಲಾಗುವುದು. ಈ ಬಗ್ಗ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು
ಪ್ರಸಾದ್ ,ಆಹಾರ ನಿರೀಕ್ಷಕ
ಪಡಿತರ ಅಕ್ಕಿ ಸಾಗಣೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ ಪಡಿತರ ಸಾಗಾಟ ಸಂಬಂಧ ನಿರಂತರ ದಾಳಿಗಳು ನಡೆಯುತ್ತಿವೆ