ಶುಕ್ರವಾರ, ಮಾರ್ಚ್ 5, 2021
30 °C

ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಮಂಗಳವಾರ 72ನೇ ಗಣರಾಜ್ಯೋ ತ್ಸವವನ್ನು ಆಚರಿಸಲಾಯಿತು.

ಬಿಎಸ್‍ಪಿ ಜಿಲ್ಲಾ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಮಾತನಾಡಿದರು. ಪಕ್ಷದ ಜಿಲ್ಲಾ ಸಂಯೋಜಕ ಕೃಷ್ಣಯ್ಯ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ನಿಕಟಪೂರ್ವ ತಾಲ್ಲೂಕು ಅಧ್ಯಕ್ಷರಾದ ಎಂ.ರಾಜಶೇಖರಮೂರ್ತಿ, ಎಸ್.ಪಿ.ಮಹೇಶ್ ಇದ್ದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಜತ್ತಿ, ಜಿ.ಪಂ. ಸದಸ್ಯರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಎಪಿಎಂಸಿ ಅಧ್ಯಕ್ಷ ನಾಗೇಂದ್ರ, ತಾ.ಪಂ. ಮಾಜಿ ಸದಸ್ಯರಾದ ಎಸ್.ರಾಜು, ಕಾಗಲವಾಡಿ ಶಿವಸ್ವಾಮಿ ಇದ್ದರು.

ನಗರದ ಎಪಿಎಂಸಿ ಕಚೇರಿಯಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸ ಲಾಯಿತು. ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಬಿ.ಎಸ್. ಶಂಕರಮೂರ್ತಿ, ನಿರ್ದೇಶಕ ವಿಶ್ವನಾಥ್, ಮಾದೇವಸ್ವಾಮಿ ನಂಜುಂಡಸ್ವಾಮಿ, ವೆಂಕಟಶೇಷಪ್ಪ, ಜೆ.ಪಿ. ದೊರೆಸ್ವಾಮಿ, ಸಹಾಯಕ ನಿರ್ದೇಶಕ ಎಂ. ರವಿಚಂದ್ರ, ಕಾರ್ಯದರ್ಶಿ ಪ್ರಕಾಶ್‍ ಕುಮಾರ್, ಮಾರುಕಟ್ಟೆ ಅಧಿಕಾರಿ ಮಧುಕುಮಾರ್ ಇದ್ದರು.

ನಗರಸಭೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಉಪಾಧ್ಯಕ್ಷೆ ಸುಧಾ, ಸದಸ್ಯರು, ಸಿಬ್ಬಂದಿ ಹಾಜರಿದ್ದರು.

ನಗರದ ಶ್ರೀ ರಾಮಚಂದ್ರ ವಿದ್ಯಾಸಂಸ್ಥೆಯಲ್ಲಿ 72ನೇ ಗಣರಾಜ್ಯೋ ತ್ಸವವನ್ನು ಆಚರಿಸಲಾ ಯಿತು. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಮಾದಯ್ಯ ಮಾತನಾಡಿ, ‘ನಮ್ಮ ಸಂವಿಧಾನ ಬೇರೆ ದೇಶಗಳಿಗೆ ಮಾದರಿಯಾಗಿದೆ. ಕೋವಿಡ್‌ನಿಂದ ಗಣರಾಜ್ಯೋತ್ಸವನ್ನು ಸರಳವಾಗಿ ಆಚರಣೆ ಮಾಡಲಾಗಿದೆ’ ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ರುದ್ರಮೂರ್ತಿ, ಡಿ.ಇಡಿ ಕಾಲೇಜು ಪ್ರಾಂಶುಪಾಲ ಸೋಮಶೇಖರ ಬಿಸಲ್ವಾಡಿ, ಮುಖ್ಯ ಶಿಕ್ಷಕ ರಂಗಸ್ವಾಮಿ, ಶಿಕ್ಷಕರಾದ ಸಿ.ವೀರಣ್ಣ, ನರಸಿಂಹರಾಜು ಇತರರು ಇದ್ದರು.

ನಗರದ ರೋಟರಿ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಯೋಧ ಸೀತಾರಾಮ್ ಮಾತನಾಡಿದರು. ರೋಟರಿ ಅಧ್ಯಕ್ಷ ಆರ್. ರಮೇಶ್, ಕಾರ್ಯದರ್ಶಿ ಸಿ.ಎನ್. ಚಂದ್ರಪ್ರಭಾ ಜೈನ್, ರೋಟರಿ ಮಾಜಿ ಗವರ್ನರ್ ಡಾ. ನಾಗರ್ಜುನ್, ಅಸಿಸ್ಟೆಂಟ್ ಗವರ್ನರ್ ಸುಭಾಷ್, ಜಿ.ಆರ್.ಅಶ್ವತ್ಥನಾರಾಯಣ್, ಸಿ.ವಿ. ಶ್ರೀನಿವಾಸಶೆಟ್ಟಿ, ಆರ್.ಎಂ.ಸ್ವಾಮಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು