ಸಂತೇಮರಹಳ್ಳಿ: ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.

ಉಮ್ಮತ್ತೂರು ಗ್ರಾಮದ ವರ್ಷ ಹಾಗೂ ಸಂತೇಮರಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ತೆಳ್ಳನೂರು ಗ್ರಾಮದ ತಾಯಮಣಿ ಆಯ್ಕೆಯಾದ ಮಹಿಳೆಯರು.

ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ ನಡೆಸುವ ‘ಮನ್ ಕೀ ಬಾತ್’ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಬಾಳೆ ದಿಂಡಿನಿಂದ ಕರಕುಶಲ ವಸ್ತುಗಳನ್ನು ತಯಾರು ಮಾಡಿ ಯಶಸ್ಸು ಕಂಡಿದ್ದರಿಂದ ಅವರನ್ನು ಆಹ್ವಾನಿಸಲಾಗಿದೆ.

ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಗ್ರಾಮಪಂಚಾಯಿತಿ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಹೆಚ್ಚಿನ ಕುಟುಂಬಗಳಿರುವ ಪಂಚಾಯಿತಿಗಳಲ್ಲಿ ಸಂತೇಮರಹಳ್ಳಿ ಗ್ರಾಮಪಂಚಾಯಿತಿಯೂ ಒಂದಾಗಿದ್ದು, ಅಧ್ಯಕ್ಷೆಯಾಗಿರುವ ತಾಯಮಣಿ ಅವರನ್ನು ಗಣರಾಜ್ಯೋತ್ಸವಕ್ಕೆ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.