ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಭಕ್ತರ ಪ್ರವೇಶಕ್ಕೆ ನಿರ್ಬಂಧ

Last Updated 14 ಅಕ್ಟೋಬರ್ 2020, 17:42 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್‌ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಗುರುವಾರ (ಅ.15) ಬೆಳಿಗ್ಗೆ ಏಳು ಗಂಟೆಯಿಂದ 17ರ ಬೆಳಿಗ್ಗೆ ಏಳು ಗಂಟೆಯವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ.

ಈ ಎರಡು ದಿನಗಳ ಅವಧಿಯಲ್ಲಿಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಜಾತ್ರೆ, ಎಣ್ಣೆಮಜ್ಜನ ಸೇವೆ ಹಾಗೂ ಅಮಾವಾಸ್ಯೆ ವಿಶೇಷ ಪೂಜೆಗಳು ನಡೆಯಲಿವೆ. ಸಾಮಾನ್ಯವಾಗಿ ಈ ಸಮಯದಲ್ಲಿ ಸಾವಿರಾರು ಭಕ್ತರು ಬರುವುದರಿಂದ ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಲಾಗಿದೆ.

ಸರಳ ದಸರಾ ಜಾತ್ರೆ: ಬೆಟ್ಟದಲ್ಲಿ ಈ ಬಾರಿಯ ದಸರಾ ಜಾತ್ರೆ ಸರಳವಾಗಿ ಆಚರಿಸಲು ತೀರ್ಮಾನಿಸಿರುವುದರಿಂದ ಇದೇ24ರಿಂದ 27ರವರೆಗೆ ನಡೆಯುವ ಆಯುಧಪೂಜೆ ಮತ್ತು ವಿಜಯದಶಮಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ಸಾಂಪ್ರದಾಯಿಕವಾಗಿ ದೇವಾಲಯದ ಮಟ್ಟಿಗೆ ನಡೆಯಲಿದೆ. ಈ ಮೂರು ದಿನಗಳ ಕಾಲವೂ ಭಕ್ತರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT