ಬುಧವಾರ, ಮಾರ್ಚ್ 3, 2021
30 °C

'ಲಾಡ್ಜ್‌, ರೆಸಾರ್ಟ್‌ಗಳಲ್ಲಿ ಶೇ 50ಕ್ಕಿಂತ ಹೆಚ್ಚು ಮಂದಿಗೆ ಅವಕಾಶ ಇಲ್ಲ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್‌–19 ಮುನ್ನೆಚ್ಚರಿಕೆ ಕ್ರಮವಾಗಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಸತಿಗೃಹಗಳು, ಪಬ್‌, ರೆಸ್ಟೋರೆಂಟ್‌ಗಳು, ಹೋಂ ಸ್ಟೇ, ಲಾಡ್ಜ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 12 ಗಂಟೆಯ ನಂತರ ಎಲ್ಲ ರೀತಿಯ ಡಿ.ಜೆ.ಸೌಂಡ್ಸ್‌, ನೃತ್ಯ ಹಾಗೂ ಪಾರ್ಟಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ. 

ಅಲ್ಲದೇ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ಹೋಟೆಲ್‌, ಪಬ್‌, ರೆಸ್ಟೋರೆಂಟ್‌, ರೆಸಾರ್ಟ್‌ಗಳು, ವಸತಿಗೃಹಗಳಲ್ಲಿ ಜನರ ಸಾಮರ್ಥ್ಯದ ಶೇ 50 ಮಂದಿಗೆ ಮಾತ್ರ ಅವಕಾಶ ನೀಡಬೇಕು. ಒಂದು ವೇಳೆ ಈಗಾಗಲೇ ಬುಕ್‌ ಆಗಿದ್ದಲ್ಲಿ ಶೇ 50ರಷ್ಟು ಬುಕ್ಕಿಂಗ್‌ಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು. ತಹಶೀಲ್ದಾರ್‌ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಖುದ್ದಾಗಿ ಇದನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ಹೇಳಿದ್ದಾರೆ. 

ಜಲಾಶಯ, ಜಲಪಾತಗಳಿಗೆ ಎರಡು ದಿನ ನಿರ್ಬಂಧ: ಈ ಮಧ್ಯೆ, ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತದ ಐದು ಕಿ.ಮೀ ವ್ಯಾಪ್ತಿಯಲ್ಲಿ, ಹೊಗೆನಕಲ್‌ ಜಲಪಾತ ಹಾಗೂ ಚಾಮರಾಜನಗರ ತಾಲ್ಲೂಕಿನ ಚಿಕ್ಕಹೊಳೆ–ಸುವರ್ಣಾವತಿ ಜಲಾಶಯಗಳ ವ್ಯಾಪ್ತಿಯಲ್ಲಿ ಡಿ.31 ಹಾಗೂ ಜನವರಿ 1ರಂದು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು