ಚಾಮರಾಜನಗರ: 2024ರಲ್ಲಿ 256, 2025ರಲ್ಲಿ 242 ಸೇರಿ ಕಳೆದ ಎರಡು ವರ್ಷಗಳಲ್ಲಿ 498 ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಆತಂಕ ವ್ಯಕ್ತಪಡಿಸಿದರು.

ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯಲ್ಲಿ ಮಾತನಾಡಿದರು.

2024ರಲ್ಲಿ 769 ಅಪಘಾತದಲ್ಲಿ 1,130 ಮಂದಿ ಗಾಯಗೊಂಡಿದ್ದರೆ, 2025ರಲ್ಲಿ 821 ಅಪಘಾತಗಳಲ್ಲಿ 1,274 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ವತಿಯಿದ ಪ್ರತಿವರ್ಷ ಸಂತೆ, ಜಾತ್ರೆ, ರೈಲು ಹಾಗೂ ಬಸ್ ನಿಲ್ದಾಣ ಹಾಗೂ ಹೆಚ್ಚು ಜನಸಂದಣಿ ಇರುವ ಸ್ಥಳದಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ಚಾಮರಾಜನಗರವನ್ನು ಅಪಘಾತ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಮಾತನಾಡಿ, ಸಂಚಾರ ನಿಯಮಗಳ ಪಾಲನೆಯಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದು, ವೈಯಕ್ತಿಕ ಸುರಕ್ಷತೆಯ ಜೊತೆಗೆ ಸಮಾಜದ ಸುರಕ್ಷತೆ ಸಾದ್ಯ. ವಾಹನಗಳ ಸಂಖ್ಯೆ ಹೆಚ್ಚಾದಂತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆ ಸುರಕ್ಷತಾ ನಿಯಮ ಪಾಲಿಸಿದರೆ ಅಪಘಾತಗಳ ಪ್ರಮಾಣ ತಗ್ಗಿಸಬಹುದು ಎಂದರು.

ಸಂಚಾರ ನಿಯಮಗಳ ಅರಿವಿದ್ದರೂ ನಿರ್ಲಕ್ಷ್ಯ ತೋರುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ. ಅಪಘಾತಗಳು ಅಕಸ್ಮಿಕವೇ ಹೊರತು ಉದ್ದೇಶಪೂರ್ವಕವಲ್ಲ. ಅಪಘಾತದಿಂದ ಕುಟುಂಬಗಳು ಬೀದಿಗೆ ಬರುವುದರಿಂದ ತಾಳ್ಮೆ ಹಾಗೂ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಸವಾರರು ಚಾಲನಾ ಪರವಾನಗಿ ಹೊಂದಿರಬೇಕು, ವಾಹನಗಳಿಗೆ ಕಡ್ಡಾಯ ವಿಮೆ ಮಾಡಿಸಿರಬೇಕು, ವಾಹನಗಳ ನೋಂದಣಿ ಪತ್ರ, ವಾಯುಮಾಲಿನ್ಯ ತಪಾಸಣೆ ಪ್ರಮಾಣ ಪತ್ರ ಹೊಂದಿರಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಹಾಗೂ ಕಾರು ಚಾಲಕರು ಸೀಟ್ ಬೆಲ್ಟ್ ಧರಿಸಿರಬೇಕು. ನಿಗದಿತ ವೇಗ ಮಿತಿಯಲ್ಲಿ ವಾಹನಗಳನ್ನು ಚಲಾಯಿಸಬೇಕು.

ಹೆದ್ದಾರಿಗಳಲ್ಲಿ ತಿರುವು ಪಡೆಯುವಾಗ ಇಂಡಿಕೇಟರ್ ಹಾಕಬೇಕು. ಕುಡಿದ ಅಮಲಿನಲ್ಲಿ ವಾಹನಗಳನ್ನು ಚಲಾಯಿಸಬಾರದು. ಸಿಗ್ನಲ್ ಜಂಪ್, ತ್ರಿಬಲ್ ರೈಡಿಂಗ್, ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಬಾರದು. ಅಪಘಾತ ತಡೆಯಲು ಪ್ರಜ್ಞಾವಂತ ನಾಗರಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ನ್ಯಾಯಾಧೀಶ ಈಶ್ವರ್ ಹೇಳಿದರು.

ಡಿಡಿಪಿಯು ಪುಟ್ಟಗೌರಮ್ಮ, ಮೋಟಾರು ವಾಹನ ಹಿರಿಯ ನಿರೀಕ್ಷಕ ಯೋಗೇಶ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಾಂತಮ್ಮ, ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಹನುಮಂತ ಉಪ್ಪಾರ್, ಆರೋಗ್ಯ ಇಲಾಖೆ ಅಧಿಕಾರಿ ಸಂತೋಷ್, ಮೋಟಾರು ವಾಹನ ನಿರೀಕ್ಷಕಿ ರಶ್ಮಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕ ಕಮರಶೆಟ್ಟಿ, ದೀಪಾ, ರೋಟರಿ ಸಿಲ್ಕ್ ಸಿಟಿ ಮಾಜಿ ಅಧ್ಯಕ್ಷ ಮಾಣಿಕ್ಚಂದ್ ಶಿರ್ವಿ, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಮಹದೇವಸ್ವಾಮಿ ಕಾರ್ಯಕ್ರಮದಲ್ಲಿ ಇದ್ದರು.

ಮಕ್ಕಳ ಕೈಗೆ ವಾಹನ ಕೊಡಬೇಡಿ

ಮಕ್ಕಳಿಗೆ ವಾಹನ ಚಲಾಯಿಸುವಂತೆ ಪೋಷಕರೇ ಪ್ರೇರೇಪಿಸುತ್ತಿರುವುದು ಸರಿಯಲ್ಲ. ಮಕ್ಕಳಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ತಿಳಿಹೇಳಬೇಕು 18 ವರ್ಷ ತುಂಬಿದ ಬಳಿಕ ವಾಹನ ಚಾಲನಾ ಪರವಾನಗಿ ಪಡೆದು ಓಡಿಸಲು ಅನುಮತಿ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಗಿರೀಶ್ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.