ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ | ಹೂಳು, ಗುಂಡಿ, ನಾಯಿಗಳ ಹಾವಳಿ; ನಿವಾಸಿಗರ ಗೋಳು

Published 26 ಜುಲೈ 2023, 13:34 IST
Last Updated 26 ಜುಲೈ 2023, 13:34 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ 4ನೇ ವಾರ್ಡ್ ಕೆ.ಎಸ್.ನಾಗರತ್ನಮ್ಮ ಬಡಾವಣೆಯ ಚರಂಡಿಗಳಲ್ಲಿ ಹೂಳು ತುಂಬಿ ಗಬ್ಬೆದ್ದು ನಾರುತ್ತಿದೆ. ನಿವಾಸಿಗರು  ನೆಮ್ಮದಿಯಿಂದ ಮನೆಯಲ್ಲಿ ವಾಸಿಸಲಾರದಂತಾಗಿದೆ.

ವಾರ್ಡ್‌ನಲ್ಲಿ ಚರಂಡಿಗಳ ಎರಡು ಬದಿಯಲ್ಲೂ ಕಸದ ರಾಶಿ ತುಂಬಿದ್ದು, ದುರ್ವಾಸನೆ ಬೀರುತ್ತಿದೆ.  ನಿವಾಸಿಗರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ನಾಗರತ್ನಮ್ಮ ಬಡಾವಣೆಯಲ್ಲಿ ಕೆಲ ರಸ್ತೆಗಳು ಗುಂಡಿಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಅಪಾಯಕಾರಿ ರಸ್ತೆಯಲ್ಲೇ ಸಂಚರಿಸಬೇಕಾಗಿದೆ. ಮಳೆ ಬಂದರೆ ನೀರು ನಿಂತು ಕೆರೆಯಂತೆ ಭಾಸವಾಗುತ್ತಿದೆ. ರಸ್ತೆಯ ಕೆಸರಿನಲ್ಲೇ ಓಡಾಡಬೇಕಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಬೀದಿನಾಯಿ ಹಾವಳಿ:

ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಹಿಂಡು ಹಿಂಡಾಗಿ ರಸ್ತೆಯ ಮಧ್ಯೆದಲ್ಲಿಯೇ ಗುಂಪು ಕಟ್ಟಿಕೊಂಡು ನಿಲ್ಲುತ್ತಿವೆ. ಬಡಾವಣೆಗೆ ಹೊಂದಿಕೊಂಡಂತೆ ಜೆಎಸ್‍ಎಸ್ ಕಾಲೇಜು ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿದ್ದು, ನಾಯಿಗಳ ಹಾವಳಿಯಿಂದ ವಿದ್ಯಾರ್ಥಿಗಳು ಭಯದಲ್ಲಿ ಓಡಾಡಬೇಕಾಗಿದೆ. ಹೀಗಿದ್ದರೂ ಕೂಡ ಸಂಬಂಧ ಪಟ್ಟ ಪುರಸಭೆ ಸದಸ್ಯರು ಕ್ರಮಕ್ಕೆ ಮುಂದಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ.

4ನೇ ವಾರ್ಡ್ ಕೆ.ಎಸ್.ನಾಗರತ್ನಮ್ಮ ಬಡಾವಣೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಚರಂಡಿಗಳಲ್ಲಿ ತುಂಬಿರುವ ಹೂಳು ತೆಗೆಸಲು ಶೀಘ್ರದಲ್ಲೆ ಕ್ರಮ ವಹಿಸಲಾಗುವುದು ಮತ್ತು ನಾಯಿಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು.
ವಸಂತಕುಮಾರಿ ಪುರಸಭೆ ಮುಖ್ಯಾಧಿಕಾರಿ, ಗುಂಡ್ಲುಪೇಟೆ

ಪ್ರತಿನಿತ್ಯವೂ ಸಾವಿರಾರು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ನಾಯಿಗಳು ಒಮ್ಮೊಮ್ಮೆ ಏಕಾಏಕಿ ದಾಳಿ ಮಾಡುತ್ತವೆ. ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ಭಯವಾಗುತ್ತದೆ ಎಂದು ವಿದ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT