ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರಳಿಕಟ್ಟೆ ಗ್ರಾಮದಲ್ಲಿ ರಸ್ತೆ ಸುರಕ್ಷತೆ ಹಾಗೂ ಆನ್ ಲೈನ್ ವಂಚನೆ ಬಗ್ಗೆ ಸಬ್ ಇನ್ಸ್ಪೆಕ್ಟರ್ ಚರಣ್ ಗೌಡ ನೇತೃತ್ವದಲ್ಲಿ ಮಂಗಳವಾರ ಅರಿವು ಮೂಡಿಸಲಾಯಿತು.

ಈ ವೇಳೆ ಸಬ್ ಇನ್ಸ್ಪೆಕ್ಟರ್ ಚರಣ್ ಗೌಡ ಮಾತನಾಡಿ, ‘ಪ್ರತಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರ ಮಾಡಬೇಕು. ಕಾರು ಸೇರಿದಂತೆ ಇನ್ನಿತರ ವಾಹನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಂಡು ಚಾಲನೆ ಮಾಡಬೇಕು. ಅತೀ ವೇಗ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಅಪರಾಧ. ಇದರಿಂದ ಅಪಘಾತಗಳು ಸಂಭವಿಸಿ ಸಾವು, ನೋವು ಸಂಭವಿಸುತ್ತವೆ. ಆದ್ದರಿಂದ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಇತ್ತೀಚೆಗೆ ಆನ್ಲೈನ್ ವಂಚನೆ ಪ್ರಕರಣಗಳು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ರೀತಿಯಲ್ಲಿ ಕಂಡು ಬರುತ್ತಿದೆ. ಇದಕ್ಕಾಗಿ ವಂಚಕರು ಅನಕ್ಷರಸ್ಥರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಅನ್ಯ ನಂಬರ್ನಿಂದ ಕರೆ ಬಂದರೆ ಯಾರು ಕೂಡ ಸ್ವೀಕರಿಸಬಾರದು. ಜೊತೆ ಹಣ ಪಾವತಿ ನೆಪದಲ್ಲಿ ಓಟಿಪಿ ಕೋಡ್, ಎಟಿಎಂ ನಂಬರ್ ಕೇಳಿದರೆ ಕೊಡಬಾರದು. ಅದಾಗ್ಯೂ ಆನ್ಲೈನ್ ವಂಚನೆಗೆ ಒಳಗಾದರೂ ಕೂಡಲೇ ಸಂಬಂಧ ಪಟ್ಟಣ ಠಾಣಾ ವ್ಯಾಪ್ತಿಗೆ ಬಂದು ದೂರು ನೀಡಬೇಕು’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೇಗೂರು ಠಾಣೆ ಪೊಲೀಸರು ಹಾಗೂ ಅರಳಿಕಟ್ಟೆ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.