ಭಾನುವಾರ, ಜೂನ್ 26, 2022
22 °C

ಎಬಿವಿಪಿ; ನೂತನ ರಾಜ್ಯ ಅಧ್ಯಕ್ಷರಾಗಿ ರೋಹಿಣಾಕ್ಷ ಶಿರ್ಲಾಲು ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ರಾಜ್ಯ ಅಧ್ಯಕ್ಷರಾಗಿ ಡಾ.ರೋಹಿಣಾಕ್ಷ ಶಿರ್ಲಾಲು ಹಾಗೂ ಕಾರ್ಯದರ್ಶಿಯಾಗಿ ಮಣಿಕಂಠ ಕಳಸ ಅವರು ಆಯ್ಕೆಯಾಗಿದ್ದಾರೆ. 

ಚಾಮರಾಜನಗರದಲ್ಲಿ ನಡೆದ ಎಬಿವಿಪಿಯ  41ನೇ ರಾಜ್ಯ ಸಮ್ಮೇಳನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ರೋಹಿಣಾಕ್ಷ ಶಿರ್ಲಾಲು ಅವರು ಕಲಬುರ್ಗಿಯ ಕೇಂದ್ರೀಯ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಮಣಿಕಂಠ ಅವರು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ. 

ಮೂರು ನಿರ್ಣಯಗಳು: ಬುಧವಾರ ಮುಕ್ತಾಯಗೊಂಡ ಎರಡು ದಿನಗಳ ರಾಜ್ಯ ಸಮ್ಮೇಳನದಲ್ಲಿ ಎಬಿವಿಪಿಯು ಮೂರು ಕರಡು ನಿರ್ಣಯಗಳನ್ನು ಅಂಗೀಕರಿಸಿದೆ. 

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಅವರು, ’ಕೋವಿಡ್‌ ನಂತರದ ಕಾಲಘಟ್ಟದಲ್ಲಿ ಶಿಕ್ಷಣ ವ್ಯವಸ್ಥೆ, ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಹಾಗೂ ರಾಜ್ಯದ ವರ್ತಮಾನ ಪರಿಸ್ಥಿತಿ ವಿಷಯಗಳ ಕುರಿತು ನಿರ್ಣಯಗಳನ್ನು ಅಂಗೀಕರಿಸಲಾಗಿದೆ‘ ಎಂದರು. 

’ರಾಜ್ಯದ ವಿವಿಗಳ ಸ್ಥಿತಿಗತಿಗಳ ಬಗ್ಗೆ ಕೈಗೊಳ್ಳಲಾದ ನಿರ್ಣಯದಲ್ಲಿ ವಿವಿಧ ವಿವಿಗಳಲ್ಲಿ ವರದಿಯಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ‘ ಎಂದರು. 

ಎಬಿವಿಪಿಯ ಜಿಲ್ಲಾ ಸಂಚಾಲಕ ಶ್ರುತನ್‌, ತಾಲ್ಲೂಕು ಸಂಚಾಲಕ ಶ್ರೀನಿಧಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು