ಸಂತೇಮರಹಳ್ಳಿ: ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟಚಲಾ ಮೂರ್ತಿ ತಿಳಿಸಿದರು.

ಸಮೀಪದ ಕಮರವಾಡಿ ಗ್ರಾಮದಲ್ಲಿ ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಭಾನುವಾರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಕಾರ್ಖಾನೆಗಳು ಹಾಗೂ ಮನೆಗಳ ನಿರ್ಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಿಡ ಮರಗಳ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಉತ್ತಮವಾದ ಗಾಳಿ, ಮಳೆ ನಮಗೆ ದೊರಕದೆ ತೊಂದರೆ ಪಡುವಂತಾಗಿದೆ. ಪರಿಸರ ನಾಶದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮೂಡಿಸುವ ನಿಟಿನಲ್ಲಿ ಮುಂದಾಗಬೇಕು ಎಂದರು.

ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಹಾಗೂ ಸಪ್ತ ಮಾತೃಕೆ ದೇವಸ್ಥಾನ ಆವರಣ ಸುತ್ತಮುತ್ತ 50ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗುತ್ತದೆ. ಗಿಡಗಳ ನಿರ್ವಹಣೆಯನ್ನು ದೇವಸ್ಥಾನದವರು ಹಾಗೂ ಗ್ರಾಮಸ್ಥರು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಶಿಬಿರಾರ್ಥಿಗಳಿಂದ ಗಿಡ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಜಾಥಾ ನಡೆಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜಕರಾದ ಡಾ.ಶಿವಕುಮಾರ್, ಎನ್.ವಿ.ಸಿಂಧು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.