ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಎಸ್ಸೆಸ್ಸೆಲ್ಸಿ ಮಕ್ಕಳಿಗೆ ರೋಟರಿಯಿಂದ ಮಾಸ್ಕ್‌ ವಿತರಣೆ

19, 22ರಂದು ಪರೀಕ್ಷೆ ಬರೆಯಲಿರುವ 12,189 ವಿದ್ಯಾರ್ಥಿಗಳು
Last Updated 17 ಜುಲೈ 2021, 3:39 IST
ಅಕ್ಷರ ಗಾತ್ರ

ಚಾಮರಾಜನಗರ: ಇದೇ 19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಉಚಿತವಾಗಿ ಎನ್‌–95 ಮಾಸ್ಕ್‌ ವಿತರಿಸಿದೆ.

ಜಿಲ್ಲೆಯಲ್ಲಿ 12,189 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಕಳೆದ ವರ್ಷದ ಪರೀಕ್ಷೆ ಸಂದರ್ಭದಲ್ಲಿ ಆರೋಗ್ಯ ಇಲಾಖೆಯು ವಿದ್ಯಾರ್ಥಿಗಳಿಗೆ ಮಾಸ್ಕ್‌ ವಿತರಿಸಿತ್ತು.

ಈ ಬಾರಿಬೆಂಗಳೂರಿನ ರೋಟರಿ ಜಿಲ್ಲೆ 3190ರ ರೋಟರಿ ಐಟಿ ಕಾರಿಡಾರ್, ಮತ್ತು ಬೆಂಗಳೂರು ಮಿಡ್ ಟೌನ್ ಜಂಟಿಯಾಗಿ ಎನ್-94 ಮಾಸ್ಕ್‌ಗಳನ್ನು ವಿತರಿಸಲು ನಿರ್ಧಾರ ಮಾಡಿವೆ.

ನಗರದ ರೋಟರಿ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ ಹಾಗೂ ಯಳಂದೂರು ತಾಲ್ಲೂಕಿನ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಮಾಸ್ಕ್‌ಗಳನ್ನು ಆಯಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಚಾಮರಾಜನಗರ ರೋಟರಿ ಅಧ್ಯಕ್ಷ ಪ್ರಕಾಶ್ ಹಾಗೂ ಸಿಲ್ಕ್‌ಸಿಟಿ ಅಧ್ಯಕ್ಷ ರವಿ ಎ.ಎಸ್ ಅವರು ಹಸ್ತಾಂತರಿಸಿದರು.

10 ಜಿಲ್ಲೆಗಳಲ್ಲಿ ವಿತರಣೆ: ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಅಧ್ಯಕ್ಷ ಪ್ರಕಾಶ್ ಅವರು, ‘ಬೆಂಗಳೂರಿನ ರೋಟರಿ ಸಂಸ್ಥೆಯ 3190 ಐಟಿ ಕಾರಿಡಾರ್ ಮತ್ತು ಮಿಡ್‌ಡೌನ್ ಸಂಸ್ಥೆಯವರು ಚಾಮರಾಜನಗರ, ಬೆಂಗಳೂರು, ಮಂಡ್ಯ , ಕೋಲಾರ, ರಾಮನಗರ ಸೇರಿದಂತೆ 10 ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಎನ್‌–95 ಮಾಸ್ಕ್‌ಗಳನ್ನು ನೀಡುತ್ತಿದ್ದಾರೆ. ಆಯಾ ಜಿಲ್ಲೆಯ ಡಿಡಿಪಿಐಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಪರೀಕ್ಷಾ ಕೇಂದ್ರಗಳ ಪೂರ್ಣ ಮಾಹಿತಿ ಪಡೆದುಕೊಂಡು ಮಾಸ್ಕ್‌ ಪೂರೈಸಲಾಗಿದೆ. ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೂ ಇದರ ಪ್ರಯೋಜನ ಸಿಗಬೇಕು ಎಂಬುದು ನಮ್ಮ ಆಶಯ’ ಎಂದು ಹೇಳಿದರು.

ರೋಟರಿ ಸಿಲ್ಕ್‌ಸಿಟಿ ಅಧ್ಯಕ್ಷ ರವಿ ಅವರು ಮಾತನಾಡಿ, ‘ಬೆಂಗಳೂರಿನ ರೋಟರಿ ಸಂಸ್ಥೆ ನಮ್ಮ ಜಿಲ್ಲೆಯನ್ನೂ ಆಯ್ಕೆ ಮಾಡಿ ವಿದ್ಯಾರ್ಥಿಗಳಿಗೆ ಮಾಸ್ಕ್‌ ನೀಡಲು ಉದ್ದೇಶಿಸಿರುವುದು ಸಂತಸದ ವಿಚಾರ. ಈ ಮಾಸ್ಕ್‌ಗಳು ಎಲ್ಲ ವಿದ್ಯಾರ್ಥಿಗಳಿಗೂ ತಲುಪಲಿದೆ ಎಂಬ ವಿಶ್ವಾಸ ನನಗಿದೆ. ನಮ್ಮ ಜಿಲ್ಲೆಗೆ ಮಾಸ್ಕ್ ದೊರೆಯಲು ಪ್ರಮುಖ ಕಾರಣೀಕರ್ತರು, ಮಾಸ್ಕ್‌ ವಿತರಣೆ ಅಭಿಯಾನದ ಡಾ.‌ನಾಗಾರ್ಜುನ್. ಅವರ ಕೆಲಸ ಅಭಿನಂದನಾರ್ಹ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT