ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಹುಂಡಿಯಲ್ಲಿ ₹1.67 ಕೋಟಿ ಸಂಗ್ರಹ

Last Updated 27 ನವೆಂಬರ್ 2021, 12:23 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 28 ದಿನಗಳ ಅವಧಿಯಲ್ಲಿ ₹1.67 ಕೋಟಿ ಹಣ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ಬೆಟ್ಟದಲ್ಲಿರುವ ಬಸ್‌ ನಿಲ್ದಾಣದ ವಾಣಿಜ್ಯು ಸಂಕೀರ್ಣದಲ್ಲಿಶುಕ್ರವಾರ ಬೆಳಿಗ್ಗೆ ಆರಂಭಗೊಂಡ ಎಣಿಕೆ ಕಾರ್ಯ ರಾತ್ರಿ ವರೆಗೂ ನಡೆಯಿತು. ಹುಂಡಿಗಳಲ್ಲಿ ₹1,67,07,270 ನಗದು ಸಂಗ್ರಹವಾಗಿದೆ. ಇದರ ಜೊತೆಗೆ 55 ಗ್ರಾಂಗಳಷ್ಟು ಚಿನ್ನ ಹಾಗೂ 2.050 ಕೆಜಿಯಷ್ಟು ಬೆಳ್ಳಿಯನ್ನೂ ಭಕ್ತರು ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕಿದ್ದಾರೆ.

ಈ ಹಿಂದೆ ಅಕ್ಟೋಬರ್‌ 29ರಂದು ಹುಂಡಿಗಳ ಎಣಿಕೆ ಕಾರ್ಯ ನಡೆದಿತ್ತು. ದೀಪಾವಳಿ ಜಾತ್ರೆ ನಡೆಯದಿದ್ದರೂ, ಆ ಬಳಿಕ ಬೆಟ್ಟಕ್ಕೆ ಭೇಟಿ ನೀಡುತ್ತಿರುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಈಗ ಕಾರ್ತಿಕ ಮಾಸವಾಗಿದ್ದು, ಪ್ರತಿ ಸೋಮವಾರ ಭಾರಿ ಸಂಖ್ಯೆಯಲ್ಲಿ ಭಕ್ತರು ಮಾದಪ್ಪನ ದರ್ಶನ ಪಡೆಯುತ್ತಿದ್ದಾರೆ.

ಸೋಮವಾರ (ನ.29) ಕಡೆ ಕಾರ್ತಿಕ ಸೋಮವಾರವಾಗಿದ್ದು, ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT