ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಮಾದಪ್ಪನ ಹುಂಡಿಯಲ್ಲಿ ₹2.62 ಕೋಟಿ ಸಂಗ್ರಹ

Last Updated 1 ಅಕ್ಟೋಬರ್ 2021, 9:32 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ಗುರುವಾರ ನಡೆದಿದ್ದು, ₹2.62 ಕೋಟಿ ನಗದು ಸಂಗ್ರಹವಾಗಿದೆ.

71 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಪೈಕಿ 14 ದಿನಗಳು ಕೋವಿಡ್‌ ಕಾರಣಕ್ಕೆ ದೇವಾಲಯಕ್ಕೆ ಭಕ್ತರ ಪ್ರವೇಶ ಇಲ್ಲದೇ ಇದ್ದುದರಿಂದ 57 ದಿನಗಳ ಅವಧಿಯಲ್ಲಿ ಭಕ್ತರು ₹2,62,76,718 ಹಣವನ್ನು ಕಾಣಿಕೆ ರೂಪದಲ್ಲಿ ಮಾದಪ್ಪನ ಹುಂಡಿಗೆ ಹಾಕಿದ್ದಾರೆ.

ನಗದು ಮಾತ್ರವಲ್ಲದೇ 170 ಗ್ರಾಂ ಚಿನ್ನ ಹಾಗೂ 3.7 ಕೆಜಿ ಬೆಳ್ಳಿಯನ್ನೂ ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.

ಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ, ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಬೆಳಿಗ್ಗೆ 7.30ಕ್ಕೆ ಆರಂಭವಾದ ಹುಂಡಿ ಎಣಿಕೆ ಕಾರ್ಯ ರಾತ್ರಿ 11.30ರವರೆಗೂ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT