ಹನೂರು: ಆರ್ಎಸ್ಎಸ್ ಸಂಘಟನೆಗೆ ಸಂವಿಧಾನಬದ್ಧ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಡಿಎಸ್ಎಸ್ ವತಿಯಿಂದ ಹನೂರಿನಲ್ಲಿ ತಹಶಿಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆರ್ಎಸ್ಎಸ್ ಸಂಘಟನೆ ಜಾತಿ-ಧರ್ಮದ ಹೆಸರಿನಲ್ಲಿ ಕಲಹ ಸೃಷ್ಟಿಸಿ ದೇಶದಲ್ಲಿ ಅಶಾಂತಿ ಹುಟ್ಟಿಸುತ್ತಿದೆ ಎಂದು ಪ್ರಿತಿಭಟನಕಾರರು ದೂರಿದರು.

‘ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ, ಕೋಮು ಸಾಮರಸ್ಯ, ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಮೌಲ್ಯ ಕಾಪಾಡಬೇಕಿದೆ’ ಎಂದು ಒತ್ತಾಯಿಸಿದರು.

ತಾಲೂಕು ಸಂಚಾಲಕ ಮಹೇಶ್ ಮಾತನಾಡಿ, ‘ಭಾರತ ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಆದರೆ ಕೆಲವು ಸಂಘಟನೆಗಳು ಸಂವಿಧಾನದ ಮೂಲಭೂತ ಮೌಲ್ಯಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಇಂತಹ ಸಂಘಟನೆಗಳಿಗೆ ಸರ್ಕಾರವು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದರು.

‘ಸಂವಿಧಾನದಲ್ಲಿ ನಮೂದಿಸಿರುವ ಪ್ರಜಾಪ್ರಭುತ್ವ, ಜಾತ್ಯಾತೀತತೆ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಆದರೆ ಕೆಲವರು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರ ಮಧ್ಯೆ ವಿಭಜನೆ ಉಂಟುಮಾಡಿ ದೇಶದ ಏಕತೆ ಹಾಗೂ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾರೆ. ಇಂತಹ ಅಂಶ ತಡೆಗಟ್ಟಲು ಸರ್ಕಾರವು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು

ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಮುರುಗೇಶ್, ಮಾರಿಯಪ್ಪ, ಸೊಮಣ್ಣ, ವೀರಾ, ನಾಗರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.