ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ತಮಿಳುನಾಡಿನಿಂದ ಬರಲೂ ನೆಗೆಟಿವ್‌ ವರದಿ ಕಡ್ಡಾಯ

Last Updated 7 ಆಗಸ್ಟ್ 2021, 16:22 IST
ಅಕ್ಷರ ಗಾತ್ರ

ಚಾಮರಾಜನಗರ: ನೆರೆಯ ತಮಿಳುನಾಡಿನಲ್ಲೂ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಲ್ಲಿಂದ ಜಿಲ್ಲೆಯ ಗಡಿ ಪ್ರವೇಶಿಸುವ ಪ್ರಯಾಣಿಕರು 72 ಗಂಟೆಗಳ ಅವಧಿಯಲ್ಲಿ ಮಾಡಿಸಿರುವ ಆರ್‌ಟಿ–ಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಕೇರಳದಿಂದ ಬರುವ ಪ್ರಯಾಣಿಕರು ಆರ್‌ಟಿ–ಪಿಸಿಆರ್‌ ನೆಗೆಟಿವ್‌ ವರದಿ ಹೊಂದಿರುವುದನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿದೆ.

ಹೊಸ ಆದೇಶದ ಪ್ರಕಾರ ತಮಿಳುನಾಡಿನಿಂದ ಬಸ್‌ ಅಥವಾ ಖಾಸಗಿ, ಬಾಡಿಗೆ ವಾಹನಗಳಲ್ಲಿ ಜಿಲ್ಲೆಯಲ್ಲಿರುವ ಅಂತರರಾಜ್ಯ ಚೆಕ್‌ಪೋಸ್ಟ್‌ಗಳಾದ ಚಾಮರಾಜನಗರ ತಾಲ್ಲೂಕಿನ ಪುಣಜನೂರು, ಹನೂರು ತಾಲ್ಲೂಕಿನ ಪಾಲಾರ್‌, ನಾಲ್‌ರೋಡ್‌, ಅರ್ಧನಾರೀಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ಗಳ ಮೂಲಕ ಜಿಲ್ಲೆ ಪ್ರವೇಶಿಸುವವರು ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದರೂ, ಮೂರು ದಿನಗಳ ಅವಧಿಯಲ್ಲಿ ನಡೆಸಿದ ಆರ್‌ಟಿ–ಪಿಸಿಆರ್‌ ಪರೀಕ್ಷೆಯ ನಗೆಟಿವ್‌ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT