ಚಾಮರಾಜನಗರ: ‘ಪ್ರತಿ ಹಳ್ಳಿಯಲ್ಲಿ ಕನಿಷ್ಠ ಒಂದು ಶಾಲೆ, ಗ್ರಾಮ ಪಂಚಾಯಿತಿ ಹಾಗೂ ಸಹಕಾರ ಸಂಘಗಳು ಇದ್ದರೆ ಮಾತ್ರ ಗ್ರಾಮೀಣ ಭಾರತದ ಅಭಿವೃದ್ಧಿ ಸಾಧ್ಯ, ಹಳ್ಳಿಗಳು ಉದ್ಧಾರವಾಗದ ಹೊರತು ದೇಶ ಅಭಿವೃದ್ಧಿಯಾಗುವುದಿಲ್ಲ ಎಂಬ ನೆಹರೂ ಅವರ ಮಾತುಗಳನ್ನು ರಾಜ್ಯ ಸರ್ಕಾರ ಈಡೇರಿಸುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿ ಅಸಮಾನತೆ ಹೋಗುವವರೆಗೂ ಜಾತಿ ವ್ಯವಸ್ಥೆ ನಿರ್ಮೂಲನೆ ಸಾಧ್ಯವಿಲ್ಲ. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ. ಈ ನಿಟ್ಟಿನಲ್ಲಿ 2013ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಭಾಗ್ಯಗಳನ್ನು ಜಾರಿಗೆ ತರಲಾಯಿತು. 2023ರಲ್ಲಿ ಮತ್ತೆ ಅಧಿಕಾರ ದೊರೆತಾಗ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಮಾಡಲು ಶ್ರಮಿಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಹೇಳಿದರು.

'ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಗುಜರಾತ್ ಹೊರುತಪಡಿಸಿ ದೇಶದಲ್ಲಿ ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಹೊಂದಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಹಾಗೂ ಸಹಕಾರ ಕ್ಷೇತ್ರವನ್ನು ಬಲಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಲು ಒಕ್ಕೂಟಗಳನ್ನು ತೆರೆಯಲಾಗುವುದು’ ಎಂದು ಭರವಸೆ ನೀಡಿದರು.

‘ರಾಜ್ಯದಲ್ಲಿ ಕೃಷಿ, ಪಶು ಸಂಗೋಪನೆ, ರೇಷ್ಮೆ, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯ ಹಿಂದೆ ಸಹಕಾರ ಕ್ಷೇತ್ರದ ಕೊಡುಗೆ ಹೆಚ್ಚಾಗಿದ್ದು, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಹೆಚ್ಚೆಚ್ಚು ಸಹಕಾರ ಸಂಘಗಳು ರಚನೆಯಾಗಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಉಚಿತವಾಗಿ ಸಹಕಾರಿಗಳಾಗಲು ಸರ್ಕಾರ ಅವಕಾಶ ಕಲ್ಪಿಸಿದೆ’ ಎಂದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಾದರಿಯಲ್ಲಿ ಸಹಕಾರ ಸಂಘಗಳಲ್ಲಿ ಅಧ್ಯಕ್ಷ ಉಪಾಧ್ಯಕ್ಷರಿಗೆ ಮೀಸಲಾತಿ ನೀಡುವ ಕ್ರಾಂತಿಕಾರಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕ್ರಿ.ಶ. 5-6ನೇ ಶತಮಾನದಲ್ಲಿ ಬೌದ್ಧ ಬಿಕ್ಕುಗಳಿಂದ ಆರಂಭವಾದ ಸಹಕಾರ ಚಳವಳಿ 12ನೇ ಶತಮಾನದಲ್ಲಿ ಬಸವಣ್ಣನವರ ಅನುಭವಮಂಟಪದಲ್ಲಿ ಶಿವಶರಣದ ಧಾರ್ಮಿಕ ಚಳವಳಿಯ ರೂಪ ಪಡೆಯಿತು. ನಂತರ ಗಾಂಧಿಜೀಯವರ ಸ್ವದೇಶಿ, ಅಸಹಕಾರ ಚಳವಳಿ ಮಹತ್ವ ಪಡೆಯಿತು. 1904ರಲ್ಲಿ ಸಿದ್ದನಗೌಡರು ಆರಂಭಿಸಿದ ಸಹಕಾರ ಚಳವಳಿ ರಾಜ್ಯದಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ನಾಂದಿಯಾಯಿತು. ಕರ್ನಾಟಕದಲ್ಲಿ 47 ಸಾವಿರ ಸಹಕಾರ ಸಂಘಗಳಿದ್ದು ಸ್ವಾವಲಂಬಿ ಬದುಕಿಗೆ ಪೂರಕವಾಗಿವೆ’ ಎಂದರು.

ಸಂಸದ ಸುನೀಲ್ ಬೋಸ್ ಮಾತನಾಡಿ, ‘ಸಹಕಾರ ಸಂಘಗಳ ಸದಸ್ಯರಾಗಿ ಸಾಲ ಪಡೆದು ರೈತರು ಹಾಗೂ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು’ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ ಜಿ.ಟಿ.ದೇವೇಗೌಡ, ಹಿರಿಯ ಸಹಕಾರಿ ಧುರೀಣ ಕೆ.ಎನ್. ರಾಜಣ್ಣ ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ದರ್ಶನ್ ಧುವನಾರಾಯಣ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಕೆ.ಶಿವಕುಮಾರ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಚಂದ್ರು, ಮಾಜಿ ಶಾಸಕರಾದ ಆರ್.ನರೇಂದ್ರ, ಕಳಲೆ ಕೇಶವಮೂರ್ತಿ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ಸಹಕಾರ ಒಕ್ಕೂಟಗಳ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್, ರಾಜ್ಯ ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ. ಕುಮಾರ್, ಸಹಕಾರ ಇಲಾಖೆ ಕಾರ್ಯದರ್ಶಿ ಎಸ್.ಬಿ.ಶೆಟ್ಟಣ್ಣನವರ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಎಸ್ಪಿ ಬಿ.ಟಿ. ಕವಿತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

‘ಹೊಸ ಜಿಲ್ಲೆ ಉದ್ಘಾಟನೆಯಲ್ಲಿ ಭಾಗವಹಿಸಿದ್ದೆ’

‘ಅವಿಭಜಿತ ಮೈಸೂರು ಜಿಲ್ಲೆಯಿಂದ ಬೇರ್ಪಟ್ಟು ಚಾಮರಾಜನಗರ ಸ್ವತಂತ್ರ ಜಿಲ್ಲೆಯಾದಾಗ ಅಂದು ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲರು ಮಹದೇಶ್ವರ ಬೆಟ್ಟದಲ್ಲಿ ನೂತನ ಚಾಮರಾಜನಗರ ಜಿಲ್ಲೆಯನ್ನು ಉದ್ಘಾಟಿಸಿದ್ದರು. ಆದರೆ, ನಾನು ಹಾಗೂ ದಿ.ಬಿ.ರಾಚಯ್ಯ ಅವರು ಚಾಮರಾಜನಗರಕ್ಕೆ ಬಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆವು’ ಎಂದು ಸಿದ್ದರಾಮಯ್ಯ ಸ್ಮರಿಸಿದರು.

‘ಕಾಂಗ್ರೆಸ್ ಸೇರಿದ್ದು ಹೀಗೆ..’

‘ಜೆಡಿಎಸ್ನಿಂದ ಉಚ್ಛಾಟನೆಯಾದ ಬಳಿ ರಾಜ್ಯದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರನ್ನು ಒಗ್ಗೂಡಿಸಲು ಅಹಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವಾಗ ಪಕ್ಷ ಸೇರುವಂತೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂತು. ಕಾಂಗ್ರೆಸ್ಗೆ ಬಂದ ಮೇಲೆ ಜನರ ಆಶೀರ್ವಾದಿಂದ ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು. ಈ ಅವಧಿಯಲ್ಲಿ ಸಮಾಜದ ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಅವಕಾಶ ದೊರೆತಿದೆ’ ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಸಚಿವ ಸ್ಥಾನದ ಸುಳಿವು

‘ಉಪ್ಪಾರ ಸಮುದಾಯದಿಂದ ಆಯ್ಕೆಯಾಗಿರುವ ರಾಜ್ಯದ ಏಕೈಕ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿ ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದಾರೆ. ಮುಂದೆಯೂ ಗೆಲ್ಲುವ ವಿಶ್ವಾಸವಿದೆ. ಅವರಿಗೆ ಮುಂದೆ ರಾಜಕೀಯದಲ್ಲಿ ಉತ್ತಮ ಭವಿಷ್ಯ ಇದೆ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸ್ಥಾನ ನೀಡುವ ಸುಳಿವು ನೀಡಿದರು.

‘ಚಾಮುಲ್ಗೆ ಬಾಕಿ ಬಿಡುಗಡೆ ಶೀಘ್ರ’

‘ಚಾಮರಾಜನಗದಲ್ಲಿ ಚಾಮುಲ್ ಹಾಲು ಒಕ್ಕೂಟ ಸ್ಥಾಪನೆಯಾದಾಗ ₹ 83 ಕೋಟಿ ಅನುದಾನ ನೀಡುವುದಾಗಿ ಘೋಷಿಸಿ ₹31 ಕೋಟಿ ಬಿಡುಗಡೆ ಮಾಡಲಾಗಿತ್ತು. ಬಾಕಿ ₹ 52 ಕೋಟಿ ಅನುದಾನವನ್ನು ಶೀಘ್ರ ಸರ್ಕಾರ ಬಿಡುಗಡೆ ಮಾಡಲಿದೆ’ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.