ಚಾಮರಾಜನಗರ: ಒಳ ಮೀಸಲಾತಿ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ ಅವರಿಗೆ ಈಚೆಗೆ ಮನವಿ ಸಲ್ಲಿಸಲಾಯಿತು.

ಒಳಮೀಸಲಾತಿ ಜಾರಿ ಸಂಬಂಧ ಸರ್ಕಾರ ಪರಿಶಿಷ್ಟ ಜಾತಿಗಳೊಳಗೆ ಉಪ ಜಾತಿಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದು, ಜಿಲ್ಲೆಯಲ್ಲಿ ಸಮೀಕ್ಷೆ ವಿಳಂಬಗತಿಯಲ್ಲಿ ಸಾಗಿದೆ. ಪರಿಶಿಷ್ಟ ಜಾತಿಯ ಮಾದಿಗ ಜನಾಂಗದ ಬೀದಿಗಳಲ್ಲಿ ಸಮರ್ಪಕವಾಗಿ ಸಮೀಕ್ಷೆ ನಡೆಯುತ್ತಿಲ್ಲ ಎಂಬ ದೂರುಗಳು ಬಂದಿವೆ.

ಸಿಬ್ಬಂದಿಗೆ 101 ಜಾತಿಗಳ ಮಾಹಿತಿಯ ಕೊರತೆ ಇದ್ದು, ಸಮೀಕ್ಷೆಯ ಸಂಪೂರ್ಣ ಮಾಹಿತಿ ಇಲ್ಲವಾಗಿದೆ. ಸರ್ವರ್ ಸಮಸ್ಯೆ, ತಾಂತ್ರಿಕ ತೊಡಕುಗಳು ಎದುರಾಗುತ್ತಿದ್ದು ಸಮೀಕ್ಷೆಯಿಂದ ಹಲವರು ಹೊರಗುಳಿಯುವ ಆತಂಕ ಎದುರಾಗಿದೆ. ಸಿಬ್ಬಂದಿ ಕಾರ್ಯ ವೈಖರಿಯನ್ನು ಪರಿಶೀಲಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಮನವಿಯಲ್ಲಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಮನವಿ ಸಲ್ಲಿಕೆ ಸಂದರ್ಭ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ, ಮುಖಂಡರಾದ ಬಸವರಾಜು, ಎಚ್.ನಾಗರಾಜು, ಕೆಸ್ತೂರು ಮರಪ್ಪ, ಬಿ.ಚಾಮರಾಜು, ಆರ್.ಸಿದ್ದರಾಜು, ಕೆ.ಜಗದೀಶ್, ಸಿ.ಎಚ್.ರಂಗಸ್ವಾಮಿ, ಮಹದೇವಯ್ಯ, ಬಣ್ಣಾರಿ, ರವಿ, ನರಸಿಂಹ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.