ಶನಿವಾರ, ಮೇ 21, 2022
28 °C
ಗ್ರಾಮೀಣ ಭಾಗದಲ್ಲಿ ಬೆಳೆಗಳಿಗೆ ವಿಶೇಷ ಪೂಜೆ, ದನಕರುಗಳನ್ನು ಕಿಚ್ಚು ಹಾಯಿಸಿ ಆಚರಣೆ

ಸಂಕ್ರಾಂತಿ ಸಡಗರ ಹೆಚ್ಚಿಸಿದ ಎಳ್ಳು ಬೆಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ಭಕ್ತಿ ಭಾವ, ಸಡಗರಗಳಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಎಳ್ಳು– ಬೆಲ್ಲ, ಕಬ್ಬಿನ ಸವಿ, ಸುಗ್ಗಿ ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದವು. 

ಹೊಸ ವರ್ಷದ ಮೊದಲ ಹಬ್ಬದ ಅಂಗವಾಗಿ ಜಿಲ್ಲೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು‌. ಜನರು ಕೂಡ ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ಜನರು ಎಳ್ಳು ಬೆಲ್ಲವನ್ನು ಸ್ನೇಹಿತರು, ನೆಂಟರಿಷ್ಟರಿಗೆ ಹಂಚಿ ಸಂಭ್ರಮಿಸಿದರು. ಮನೆಗಳಲ್ಲಿ ಪೊಂಗಲ್‌ ಸೇರಿದಂತೆ ವಿಶೇಷ ಅಡುಗೆ ಸಿದ್ಧಪಡಿಸಿ ಬಂಧುಗಳನ್ನು ಆಹ್ವಾನಿಸಿ ಬಡಿಸಿದರು. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹಬ್ಬ ಆಚರಣೆ ಜೋರಾಗಿತ್ತು.  

ಗೋವುಗಳಿಗೆ ಪೂಜೆ: ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಸುಗಳಿಗೆ ಪೂಜೆ ಸಲ್ಲಿಸಿದರು. 

ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹೊಸ ಫಸಲುಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಸಂಕ್ರಾಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಹಬ್ಬದ ಅಂಗವಾಗಿ, ಸಂಜೆ ಹೊತ್ತು ಎತ್ತುಗಳನ್ನು ಕಿಚ್ಚು ಹಾಯಿಸಿ ಸಂಭ್ರಮಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು