ಸಂತೇಮರಹಳ್ಳಿ: ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಹಸಿವು ನೀಗಿಸುವ ಅಕ್ಷರ ದಾಸೋಹ ಸಿಬ್ಬಂದಿಯ ಕಾಯಕ ತಾಯಿಯ ಸೇವೆಗೆ ಸಮ ಎಂದು ಉಪ ಪ್ರಾಂಶುಪಾಲ ಪುಷ್ಬರಾಜು ತಿಳಿಸಿದರು.

ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ಆಯೋಜಿಸಿದ್ದ 2025-26ನೇ ಸಾಲಿನ ಅಕ್ಷರ ದಾಸೋಹ ಸಿಬ್ಬಂದಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಸಿಯೂಟ ತಯಾರಿಸುವ ಮೂಲಕ ಬಡ ಮಕ್ಕಳ ಹಸಿವು ನೀಗಿಸುವುದರ ಜೊತೆಗೆ ಅಪೌಷ್ಟಿಕತೆ ನೀಗುವ ಕಾರ್ಯದಲ್ಲಿ ಅಕ್ಷರ ದಾಸೋಹ ಸಿಬ್ಬಂದಿ ಕೈಜೋಡಿಸಿದ್ದಾರೆ.

ವರ್ಷಪೂರ್ತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿಗೆ ಅಡುಗೆ ತಯಾರಿಸಿ ಬಡಿಸುವ ಇವರ ಸೇವೆ ಸ್ಮರಣೀಯ ಪ್ರತಿದಿನ ಮಕ್ಕಳಿಗೆ ಹಾಲು, ಮೊಟ್ಟೆ, ಅನ್ನ ಸಾಂಬರ್ ಹಾಗೂ ವಿಶೇಷ ಖಾದ್ಯಗಳನ್ನು ತಯಾರಿಸುತ್ತಾರೆ. ಆಹಾರದ ಗುಣಮಟ್ಟ ಹಾಳಾಗದಂತೆ ಎಚ್ಚರಿಕೆ ವಹಿಸುತ್ತಾರೆ. ಕಷ್ಟಪಟ್ಟು ದುಡಿದರೂ ಅಕ್ಷರ ದಾಸೋಹ ಸಿಬ್ಬಂದಿಗೆ ಸಿಗುವ ವೇತನ ತೀರಾ ಕಡಿಮೆಯಾಗಿದೆ ಎಂದರು. ಶಿಕ್ಷಕರಾದ ಪುಟ್ಟರಾಜು, ಶಾಂತಮೂರ್ತಿ, ಆಶಿಯಮ್ಮ, ಸೀಬಾಅಮ್ರಿನ್, ಮಹದೇವಮ್ಮ, ಮಂಚಯ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-37-229655242

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.