ಸಂತೇಮರಹಳ್ಳಿ: ರಾಜ್ಯ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದಿದ್ದು, ಸೋಮವಾರ ಅಭಿನಂದಿಸಲಾಯಿತು.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಕೆಪಿಎಸ್ ಶಾಲೆಯಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವೈಯಕ್ತಿಕ ವಿಭಾಗದಲ್ಲಿ ರಮ್ಯ ಹಾಗೂ ತನುಶ್ರೀ ತಮಿಳಿನಲ್ಲಿ ದ್ವಿತೀಯ ಹಾಗೂ ತೆಲುಗಿನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ಶಾಲೆಯ ಪ್ರಾಂಶುಪಾಲ ಇವರನ್ನು ಅಭಿನಂದಿಸಿ ಮಾತನಾಡಿ, ‘ಇದೇ ಮೊದಲ ಬಾರಿಗೆ ನಮ್ಮ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದಲ್ಲಿ ಬಹುಮಾನ ಗಳಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿನಿಯರು ದ್ರಾವಿಡ ಭಾಷೆಗಳಾದ ತಮಿಳು ಮತ್ತು ತೆಲುಗು ಭಾಷೆಯ ಭಾಷಣ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಮಕ್ಕಳಲ್ಲಿ ಸ್ಫೂರ್ತಿ ತುಂಬಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆ ಜತೆಗೆ ಇತರ ಭಾಷೆಗಳ ಮಹತ್ವ ಅರಿತು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.

ಶಿಕ್ಷಕರಾದ ನಾಗೇಶ್, ಶಾಂತಮೂರ್ತಿ, ಆಶಿಯಮ್ಮ, ಸೀಬಾ, ಅಮ್ರೀನ್, ರಾಜೇಶ್ವರಿ, ಮಹದೇವಮ್ಮ, ಸುಶೀಲಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.