ಸಂತೇಮರಹಳ್ಳಿ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೋಮವಾರ ವಿಶ್ವ ತಂಬಾಕು ವಿರೋಧಿ ದಿನವನ್ನು ಆಚರಿಸಲಾಯಿತು.

ಪಿಎಸ್ಐ ಮೋಹನ್ ಕುಮಾರ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಅತಿಯಾದ ತಂಬಾಕು ಸೇವನೆಯಿಂದ ಯುವಕರು ಸಾಯುತ್ತಿರುವ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಿಶ್ವ ತಂಬಾಕು ವಿರೋಧಿ ದಿನವನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆ’ ಎಂದರು.

‘ಯೋಜನೆ ಕಾರ್ಯಕ್ರಮಗಳು ಸಮಾಜಕ್ಕೆ ಅತ್ಯಂತ ಪೂರಕವಾಗಿವೆ. ಸಾರ್ವಜನಿಕರು ತಂಬಾಕು ಹಾಗೂ ಇನ್ನಿತರೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಬೇಕು. ಪೊಲೀಸ್ ಇಲಾಖೆ ಸಮುದಾಯ ಮತ್ತು ಕುಟುಂಬಗಳ ರಕ್ಷಣೆಗೆ ಸದಾ ಸಿದ್ಧವಿದೆ. ಇಲಾಖೆಯ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಯಳಂದೂರು ತಾಲ್ಲೂಕು ಯೋಜನಾಧಿಕಾರಿ ಆನಂದ ಗೌಡ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ಅವರು, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸವಿತಾ, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಆಕಾಶ್ ಬಾಬು ಹಾಗೂ ರಮೇಶ್, ಒಕ್ಕೂಟದ ಅಧ್ಯಕ್ಷ ರಾಜು, ಮೇಲ್ವಿಚಾರಕ ಸತೀಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸಿಂಧು, ಸೇವಾ ಪ್ರತಿನಿಧಿ ಮಮತಾ, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-160975461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.