ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಸವಿತಾ ಸಮುದಾಯ ಮುಂಚೂಣಿಗೆ ಬರಬೇಕು: ಡಿ.ಸಿ

Published 17 ಫೆಬ್ರುವರಿ 2024, 8:28 IST
Last Updated 17 ಫೆಬ್ರುವರಿ 2024, 8:28 IST
ಅಕ್ಷರ ಗಾತ್ರ

ಚಾಮರಾಜನಗರ: ಸವಿತಾ ಸಮುದಾಯವು ಶಿಕ್ಷಣ ಪಡೆದು, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದಲ್ಲಿ ಮುಂಚೂಣಿಗೆ ಬರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಶುಕ್ರವಾರ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

‘ಸವಿತಾ ಸಮುದಾಯವು ದೊಡ್ಡ ಇತಿಹಾಸನು ಹೊಂದಿದೆ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ದಿಗೆ ಜಿಲ್ಲಾಡಳಿತ ಸಹಕಾರ ನೀಡಲಿದೆ’ ಎಂದು ಶಿಲ್ಪಾ ನಾಗ್ ಅವರು ತಿಳಿಸಿದರು.

ನಗರಸಭಾ ಸದಸ್ಯೆ ಮಮತಾ ಮಾತನಾಡಿ, ‘ಸವಿತಾ ಮಹರ್ಷಿಗಳನ್ನು ಶಿವನು ತನ್ನ ಗಡ್ಡದ ಕ್ಷೌರಕ್ಕಾಗಿ ಸೃಷ್ಟಿಸಿದರು. ಅಲ್ಲದೆ ದೇವಾನು ದೇವತೆಗಳಿಗೆ ಸವಿತಾ ಮಹರ್ಷಿಗಳು ಕ್ಷೌರ ಮಾಡುತ್ತಿದರು ಎಂಬ ಪ್ರತೀತಿ ಇದೆ. ಮದುವೆ ಇನ್ನಿತರ ಶುಭಕಾರ್ಯಗಳಲ್ಲಿ ಸವಿತಾ ಸಮುದಾಯದವರಿದ್ದರೆ ಒಳಿತಾಗಲಿದೆ ಎಂಬ ನಂಬಿಕೆಯೂ ಪ್ರಚಲಿತದಲ್ಲಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, ‘ಸವಿತಾ ಮಹರ್ಷಿಗಳು ಶಿವನ ಪರಿಚಾರಕರಾಗಿದ್ದರು. ಸಮುದಾಯದವರು ಸರ್ಕಾರದ ಸೌಲಭ್ಯ ಪಡೆಯಲು ಯಾವುದೇ ಸಮಸ್ಯೆ ಇದ್ದರೂ ನೇರವಾಗಿ ಸಂಪರ್ಕಿಸಬಹುದು. ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸಲಾಗುವುದು’ ಎಂದರು.

ತಾಲ್ಲೂಕು ಸವಿತಾ ಸಮಾಜದ ಅದ್ಯಕ್ಷ ಬಸವಣ್ಣ, ಸಮುದಾಯದ ಮುಖಂಡರಾದ ಚಿನ್ನಸ್ವಾಮಿ, ರಂಗಸ್ವಾಮಿ, ಮಹದೇವಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಯಜಮಾನರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT