ಚಾಮರಾಜನಗರ: ಮುಂಬರುವ ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಜನಸಂಖ್ಯೆಯ ಆಧಾರದ ಮೇಲೆ ಬಜೆಟ್ ಒಟ್ಟು ಗ್ರಾತ್ರದಲ್ಲಿ ಶೇ 24.1ರಷ್ಟು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಒಳ ಮೀಸಲಾತಿ ಜಾರಿ ಸಂಬಂಧ ರೋಸ್ಟರ್ ಬಿಂದು ಗೊಂದಲ ಸರಿಪಡಿಸಿ 101 ಪರಿಶಿಷ್ಟ ಜಾತಿಗಳಿಗೂ ಅನ್ಯಾಯವಾಗದಂತೆ ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಬೇಕು, ವಸತಿ ನಿಲಯ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವ ಎಲ್ಲ ಎಸ್.ಸಿ, ಎಸ್.ಟಿ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ನಾಗರಿಕ ಹಕ್ಕುಗಳ ರಕ್ಷಣಾ ಕಾಯ್ದೆ ಮತ್ತು ದೌರ್ಜನ್ಯ ತಡೆ ಕಾಯ್ದೆಗಳ ಸಮರ್ಪಕ ಅನುಷ್ಠಾನವಾಗಬೇಕು. ಅಪರಾಧಗಳ ಪತ್ತೆ, ವಿಚಾರಣೆ ಮೇಲೆ ನಿಗಾ ಇರಿಸಲು ಪ್ರತ್ಯೇಕ ಸಮಿತಿ ರಚಿಸಬೇಕು, ಗ್ರಾಮಗಳಲ್ಲಿ ಕಡ್ಡಾಯವಾಗಿ ದಲಿತರಿಗೆ ಸ್ಮಶಾನ ಭೂಮಿ ಮೀಸಲಿರಿಸಬೇಕು. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಿ ಮೀಸಲಾತಿ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು. ಖಾಸಗಿ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯದಡಿ ಮೀಸಲಾತಿ ಜಾರಿಗೊಳಿಸಬೇಕು. ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ನೀಡಬೇಕು. ಫಾರಂ-57 ಅರ್ಜಿ ಸಲ್ಲಿಸಲು ಮರು ಅವಕಾಶ ನೀಡಬೇಕು.

ನ್ಯಾಯಾಧೀಶರ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಬೇಕು, ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಎಲ್ಲ ನಿಗಮ ಮಂಡಳಿಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಎಸ್.ಸಿ/ಎಸ್.ಟಿ ವರ್ಗಗಳ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು. ಭೂ ಒಡೆತನ ಯೋಜನೆಗೆ ಹಣ ಮೀಸಲಿಡಬೇಕು. ವಸತಿ ಯೋಜನೆಯಡಿ ಅರ್ಹರಿಗೆ ಮನೆ ಮಂಜೂರು ಮಾಡಿ ಸಹಾಯಧನವನ್ನು 5 ಲಕ್ಷಕ್ಕೆ ಹೆಚ್ಚಿಸಬೇಕು. ನಿರಾಶ್ರಿತರಿಗೆ ನಿವೇಶನ ಮತ್ತು ಹಕ್ಕು ಪತ್ರ ನೀಡಿ ದಾಖಲೆ ಇಡಬೇಕು ಎಂದು ಬೇಡಿಕೆ ಸಲ್ಲಿಸಿದರು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ರದ್ದು ಮಾಡಬೇಕು. ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ದುರ್ಬಳಕೆ ಮಾಡಬಾರದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮಿನಾರಾಯಣ ನಾಗವಾರ ಸ್ಥಾಪಿತ) ಜಿಲ್ಲಾ
ಸಂಘಟನಾ ಸಂಚಾಲಕ ಕಂದಹಳ್ಳಿ ನಾರಾಯಣ್ ನೇತೃತ್ವದಲ್ಲಿ ಒತ್ತಾಯಿಸಲಾಯಿತು.

ಮನವಿ ಸಲ್ಲಿಕೆ ವೇಳೆ ಭಾಗ್ಯಲಕ್ಷ್ಮೀ, ಮಲ್ಲರಾಜು, ಶಂಕರಮೂರ್ತಿ, ಆಟೊ ರಂಗಸ್ವಾಮಿ, ರಾಜಮ್ಮ, ಶಾಂತಮ್ಮ, ಕೆ.ಸಿ.ನಾಗರಾಜು, ದುಂಡಯ್ಯ, ಕಂದಹಳ್ಳಿ ಸೋಮಣ್ಣ, ಉಮೇಶ್ವರಿ, ನಾಗಮ್ಮ, ಮಹೇಶ್, ಸೋಮಣ್ಣ ಹೊನ್ನೂರು, ಕೆಂಪರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.