ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ

Last Updated 9 ಅಕ್ಟೋಬರ್ 2022, 6:13 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯ ಸರ್ಕಾರವು ನ್ಯಾ.ನಾಗಮೋಹನ್‌ದಾಸ್‌ ಸಮಿತಿ ವರದಿ ಶಿಫಾರಸಿನಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡುವ ಘೋಷಣೆ ಮಾಡಿರುವುದನ್ನು ಸ್ವಾಗತಿಸಿರುವ ಎರಡೂ ಸಮುದಾಯಗಳ ಮುಖಂಡರು, ನಗರದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಭುವನೇಶ್ವರಿ ವೃತ್ತದಲ್ಲಿ ಸೇರಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮುಖಂಡರು, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮೈಸೂರಿನ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ ಶೋಷಿತ ಸಮುದಾಯಗಳ ಮಠಾಧೀಶರಿಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರ್ಕಾರದ ಪರವಾಗಿ ಜೈಕಾರ ಕೂಗಿ ಸಂಭ್ರಮಿಸಿದರು.

ಸಮುದಾಯದ ಮುಖಂಡರಾದ ಎಂ.ರಾಮಚಂದ್ರ, ಕೆಲ್ಲಂಬಳ್ಳಿ ಸೋಮನಾಯಕ, ನಾಯಕರ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ, ಅರಕಲವಾಡಿ ನಾಗೇಂದ್ರ ಮಾತನಾಡಿ, ‘ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ ಶೋಷಿತ ಸಮುದಾಯಗಳ ಶ್ರೀಗಳು ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿಗೊಳಿಸುವಂತೆ ಆಗ್ರಹಿಸಿ ನಿರಂತವಾಗಿ ಹೋರಾಟ ನಡೆಸಿದ್ದರು. ಪ್ರಸನ್ನಾನಂದಪುರಿ ಸ್ವಾಮೀಜಿ ಅವರು 242 ದಿನಗಳ ಆಹೋರಾತ್ರಿ ಧರಣಿ ನಡೆಸಿದರು. ಅದರ ಫಲವಾಗಿ ಸರ್ಕಾರ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಲು ತೀರ್ಮಾನ ಕೈಗೊಂಡಿದೆ. ಇದಕ್ಕಾಗಿ ಸಹಕರಿಸಿದ ಮುಖ್ಯಮಂತ್ರಿಗಳಿಗೆ, ವಿರೋಧ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದರು.

ನಗರಸಭಾ ಸದಸ್ಯ ಶಿವರಾಜ್, ಮುಖಂಡರಾದ ಸುರೇಶ್‌ನಾಯಕ, ಮಹದೇವನಾಯಕ, ಯ.ರಾಜುನಾಯಕ, ಸುರೇಶ್‌ನಾಗ್, ಕೃಷ್ಣನಾಯಕ, ನಾಗೇಂದ್ರ, ಶಿವು ವಿರಾಟ್, ಸಿಂಗನಪುರ ಮಹೇಶ್, ಬುಲೆಟ್ ಚಂದ್ರು, ಕೆ.ಎಂ.ನಾಗರಾಜು, ರವಿಚಂದ್ರ ಪ್ರಸಾದ್, ಎಸ್.ಪಿ.ಮಹೇಶ್, ವೇಣು ಗೋಪಾಲ್, ಬ್ಯಾಡಮೂಡ್ಲು ಬಸವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT