ಗುಂಡ್ಲುಪೇಟೆ: ವಿಜ್ಞಾನ ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲೂ ವಿಜ್ಞಾನಿಗಳ ಕೊಡುಗೆ ಅಪಾರ ಎಂದು ಮುಖ್ಯ ಶಿಕ್ಷಕ ಮಹದೇಶ್ವರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಪರಿಸರ ಮಿತ್ರ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಅವರು ಮಾತನಾಡಿದರು. ವೈಜ್ಞಾನಿಕ ಸಂಶೋಧನೆ ಮನು ಕುಲದ ಉದ್ಧಾರಕ್ಕೆ ಪೂರಕವಾಗಿರಬೇಕೇ ಹೊರತು ಮಾರಕವಾಗಬಾರದು. ಪ್ರತಿಯೊಂದು ವಿಚಾರಗಳನ್ನು ವೈಜ್ಞಾನಿಕ ಮನೋಭಾವದಿಂದ ಒರೆಗೆಹಚ್ಚುವ, ವಿಶ್ಲೇಷಿಸುವ, ಪ್ರಶ್ನಿಸುವ, ಒಪ್ಪಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಗತ್ತಿಗೆ ವೈಜ್ಞಾನಿಕ ಕೊಡುಗೆ ನೀಡಿರುವ ಪ್ರತಿಯೊಬ್ಬ ವಿಜ್ಞಾನಿಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ವಿಜ್ಞಾನಿಗಳ ಬಗ್ಗೆ ಚಿತ್ರಕಲೆ, ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಿ ವಿಜೇತರಾದವಗೆ ಬಹುಮಾನವಾಗಿ ನೀಡಲಾಯಿತು. ಶಿಕ್ಷಕರಾದ ನಂದಿನಿ, ವಿನೋದ, ಕವಿತ, ಶಾಲಾ ಮಕ್ಕಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.