ಚಾಮರಾಜನಗರ: ‘ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಅಭಿವೃದ್ಧಿಗೆ ಮೀಸಲಾಗಿದ್ದು ಎಸ್ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡು ಸಮುದಾಯಗಳಿಗೆ ಅನ್ಯಾಯ ಎಸಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಆಗಸ್ಟ್ 7 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು.

ನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 7ರಂದು ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮಾರ್ಗವಾಗಿ ಜಿಲ್ಲಾಡಳಿತ ಭವನದ ಬಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಬಿ.ಶ್ರೀರಾಮುಲು, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ದಲಿತರ ಅಭಿವೃದ್ಧಿಗೆ ಮೀಸಲಾಗಿದ್ದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಎಸ್ಸಿ, ಎಸ್ಟಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಪ್ರತಿಭಟನೆ ಆಯೋಜಿಸಲಾಗಿದೆ’ ಎಂದರು.

ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲಕೃಷ್ಣರಾಜ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್, ಒಬಿಸಿ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ನೂರೊಂದು ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಸುಂದರ್, ನಗರಸಭೆ ಅಧ್ಯಕ್ಷ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ, ರಾಜು, ಜಯಸುಂದರ್, ಚಂದ್ರಶೇಖರ, ಮೂಡಳ್ಳಿಮೂರ್ತಿ, ಕಮಲಮ್ಮ, ವಿರಾಟ್ ಶಿವು, ಪದ್ಮಾ, ಶಂಕರ ನಾಯಕ್, ರಾಜು, ಬುಲೆಟ್ ಚಂದ್ರು, ಮಾಂಬಳ್ಳಿ ರಾಮಣ್ಣ, ಮುತ್ತಿಗೆ ಮೂರ್ತಿ ಸಭೆಯಲ್ಲಿ ಭಾಗವಹಿಸಿದ್ದರು.

ಚಾಮರಾಜೇಶ್ವರ ದೇವಸ್ಥಾನದ ಬಳಿಯಿಂದ ಪ್ರತಿಭಟನಾ ಮೆರವಣಿಗೆಗೆ ‘ಕಾಂಗ್ರೆಸ್ ಸರ್ಕರದಿಂದ ನಿಗಮಗಳಿಗೆ ತೀರಾ ಕಡಿಮೆ ಅನುದಾನ’ ‘ಬೆರಳೆಣಿಕೆ ಫಲಾನುಭವಿಗಳಿಗೆ ಮಾತ್ರ ಪ್ರಯೋಜನ’

‘ಕಡಿಮೆ ಅನುದಾನ’ ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಮಂಡಳಿಗೆ ಅಗತ್ಯ ಅನುದಾನ ಬಿಡುಗಡೆಯಾಗುತ್ತಿತ್ತು. ಅರ್ಹರಿಗೆ ಕೊಳವೆ ಬಾವಿ ಸಹಿತ ಹಲವು ಸೌಲಭ್ಯಗಳು ದೊರೆಯುತ್ತಿದ್ದವು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಬೇಡ್ಕರ್ ವಾಲ್ಮೀಕಿ ನಿಗಮ ಸೇರಿದಂತೆ ಇತರ ನಿಗಮಗಳಿಗೆ ತೀರಾ ಕಡಿಮೆ ಅನುದಾನ ನೀಡಲಾಗುತ್ತಿದ್ದು ಬೆರಳೆಣಿಕೆ ಫಲಾನುಭವಿಗಳಿಗೆ ಮಾತ್ರ ದೊರೆಯುತ್ತಿದೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.