ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬ್ರಿ ಮಸೀದಿ ದ್ವಂಸ: ನಿರಾಶಾದಾಯಕ ಆದೇಶ–ಎಸ್‌ಡಿಪಿಐ

ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯೆ
Last Updated 30 ಸೆಪ್ಟೆಂಬರ್ 2020, 17:08 IST
ಅಕ್ಷರ ಗಾತ್ರ

ಚಾಮರಾಜನಗರ: ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್‌ ನೀಡಿರುವ ಆದೇಶ ನಿರಾಶಾದಾಯಕವಾಗಿದೆ ಎಂದು ಎಸ್‌ಡಿಪಿಐನ ಜಿಲ್ಲಾ ಘಟಕ ಹೇಳಿದೆ.

ಆದೇಶ ಪ್ರಕಟಗೊಂಡ ನಂತರ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು, ಕೋರ್ಟ್‌ನ ತೀರ್ಮಾನದ ಬಗ್ಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಕಲೀಲ್ ಉಲ್ಲಾ ಅವರು, ‘ದೇಶದ ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಈ ಆದೇಶ ಅನಿರೀಕ್ಷಿತವಲ್ಲದಿದ್ದರೂ, ನ್ಯಾಯಾಂಗದ ಮೇಲೆ ಜನಸಾಮಾನ್ಯವರು ಇಟ್ಟಿದ್ದ ನಂಬಿಕೆ ಹುಸಿಯಾಗುವಂತೆ ಮಾಡಿದೆ. ಮಸೀದಿ ಧ್ವಂಸ ಪೂರ್ವನಿಯೋಜಿತವಲ್ಲ ಮತ್ತು ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿಲ್ಲ ಎಂಬ ನ್ಯಾಯಾಲಯದ ಅವಲೋಕನವು ನ್ಯಾಯವನ್ನು ಅಪಹಾಸ್ಯ ಮಾಡುವಂತಿದೆ’ ಎಂದು ಅವರು ಹೇಳಿದ್ದಾರೆ.

‘ಅಯೋಧ್ಯೆಯಲ್ಲಿನ ಐತಿಹಾಸಿಕ ಬಾಬ್ರಿ ಮಸೀದಿಯ ವಿಷಯದಲ್ಲಿ ಸುಪ್ರೀಂಕೋರ್ಟ್‌ಗೆ ನೀಡಿದ ಎಲ್ಲ ಭರವಸೆಗಳು ಮತ್ತು ವಾಗ್ದಾನಗಳನ್ನು ಉಲ್ಲಂಘಿಸಿ, ಬಿಜೆಪಿಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಇತರರ ನೇತೃತ್ವದ ಕರಸೇವಕರು ಮಸೀದಿಯನ್ನು ನೆಲಸಮ ಮಾಡಿದ್ದನ್ನು ಇಡೀ ಜಗತ್ತು ನೇರವಾಗಿ ವೀಕ್ಷಿಸಿದೆ’ ಎಂದು ಅವರು ಹೇಳಿದ್ದಾರೆ.

‘ಮಸೀದಿ ಧ್ವಂಸ ಪ್ರಕರಣದ ವಿಚಾರಣೆಗೆ ನೇಮಕಗೊಂಡ ಲಿಬರ್ಹಾನ್ ಆಯೋಗವು 17 ವರ್ಷಗಳ ನಂತರ ಸಲ್ಲಿಸಿದ್ದ ವರದಿಯಲ್ಲಿ ಮಸೀದಿ ಧ್ವಂಸ ಕೃತ್ಯವು ಪೂರ್ವಯೋಜಿತ, ಉದ್ದೇಶಪೂರ್ವಕ ಹಾಗೂ ವ್ಯವಸ್ಥಿತವಾಗಿತ್ತು. ಬಿಜೆಪಿ ಸೇರಿದಂತೆ ಸಂಘ ಪರಿವಾರ ಮತ್ತು ಅದರ ಅಂಗಸಂಸ್ಥೆಗಳು ಉದ್ದೇಶಪೂರ್ವಕವಾಗಿ ಕೋಮು ಅಸಹಿಷ್ಣುತೆಯ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ರೂಪಿಸಿದ ಕೃತ್ಯವಾಗಿತ್ತು ಎಂದು ಹೇಳಿತ್ತು. ವರದಿಯಲ್ಲಿ 68 ಜನರನ್ನು ಹೆಸರಿಸಲಾಗಿದ್ದು, ಅವರಲ್ಲಿ ಹೆಚ್ಚಿನವರು ಸಂಘ ಪರಿವಾರದವರು. ಇಷ್ಟಾದರೂ ನ್ಯಾಯಾಲಯ ದೋಷ ಮುಕ್ತ ಮಾಡಿರುವುದು ಅಚ್ಚರಿ ಉಂಟು ಮಾಡಿದೆ’ ಎಂದು ಅವರು ಹೇಳಿದ್ದಾರೆ.

ಎಸ್‌ಡಿಪಿಐನ ಜಿಲ್ಲಾ ಸಮಿತಿ ಸದಸ್ಯ ಅಬ್ರಾರ್ ಅಹಮದ್, ಉಪಾಧ್ಯಕ್ಷ ಸಮೀ ಉಲ್ಲಾ ಖಾನ್, ಕಾರ್ಯದರ್ಶಿ ಜಬೀ ನೂರ್ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಸೈಯದ್ ಆರೀಫ್, ಕಿಜರ್ ಆಹಮದ್, ನಗರಸಭಾ ಸದಸ್ಯರಾದ ಮೊಹಮ್ಮದ್ ಅಮೀಕ್ ಮತ್ತು ವಾರ್ಡ್ ಅಧ್ಯಕ್ಷರು, ಕಾರ್ಯದರ್ಶಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT