ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರಕ್ಕೆ ಅಡಿಗಲ್ಲು: ಚಾಮರಾಜನಗರ ಜಿಲ್ಲೆಯಲ್ಲಿ ನಿಷೇಧಾಜ್ಞೆ

Last Updated 4 ಆಗಸ್ಟ್ 2020, 10:54 IST
ಅಕ್ಷರ ಗಾತ್ರ

ಚಾಮರಾಜನಗರ: ಅಯೋಧ್ಯೆಯಲ್ಲಿ ಬುಧವಾರ (ಆಗಸ್ಟ್‌ 5) ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿರುವುದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಸಿಆರ್‌ಪಿಸಿ 144 ಸೆಕ್ಷನ್‌ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ.

ಹಾಗಾಗಿ, ಜಿಲ್ಲೆಯಲ್ಲಿ ಪ್ರತಿಭಟನೆ, ವಿಜಯೋತ್ಸವ, ರ‍್ಯಾಲಿ, ಪಟಾಕಿ ಸಿಡಿಸುವುದು ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ.

ಮದ್ಯ ಮಾರಾಟಕ್ಕೂ ನಿಷೇಧ: ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳವಾರ ಸಂಜೆ ಆರು ಗಂಟೆಯಿಂದ ಬುಧವಾರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲ ಮದ್ಯಗಳನ್ನು ಮುಚ್ಚಲು ಹಾಗೂ ಮದ್ಯ ತಯಾರಿಕೆ/ಸರಬರಾಜು ಮಾರಾಟಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT