ಗುರುವಾರ , ಫೆಬ್ರವರಿ 9, 2023
30 °C

ಚಾರುಲತಾ ಸೋಮಲ್‌ಗೆ ಬೀಳ್ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಇತ್ತೀಚೆಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಜಿಲ್ಲಾಡಳಿತದಿಂದ ಬುಧವಾರ ಬೀಳ್ಕೊಡುಗೆ ನೀಡಲಾಯಿತು. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಎಸ್.ರಮೇಶ್ ಅವರನ್ನು ಸ್ವಾಗತಿಸಲಾಯಿತು. 

ನವದೆಹಲಿಯ ಕರ್ನಾಟಕ ಭವನದಲ್ಲಿ ಸಹಾಯಕ ಸ್ಥಾನಿಕ ಆಯುಕ್ತೆ ಆಗಿ ಚಾರುಲತಾ ವರ್ಗಾವಣೆಗೊಂಡಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳು, ರೈತ ಸಂಘ, ಪೌರಕಾರ್ಮಿಕ ಸಂಘಟನೆ ಮುಖಂಡರು, ಕಲಾವಿದರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಚಾರುಲತಾ, ‘=ಜಿಲ್ಲೆಯಲ್ಲಿ 11 ತಿಂಗಳು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನಗೆ ದೊರೆತ ಅದೃಷ್ಟ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ ಮುಖಂಡರು, ರೈತರ ಸಂಘಟನೆಯ ಪ್ರತಿನಿಧಿಗಳ ಸಹಕಾರ ಸಿಕ್ಕಿದೆ. ನನಗೆ ತೋರಿದ ಪ್ರೀತಿ ಬೆಂಬಲಕ್ಕೆ ಚಿರಋಣಿಯಾಗಿದ್ದೇನೆ’ ಎಂದರು.

ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಾತನಾಡಿ, ‘ಚಾರುಲತಾ ಅವರಿಗೆ ಅಪಾರ ಪ್ರೀತಿ, ಸಹಕಾರ ವ್ಯಕ್ತವಾಗಿರುವುದನ್ನು ನೋಡಿದ್ದೇನೆ. ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿ ಹಾಗೂ ಅಭಿವೃದ್ಧಿಗೆ ನಾನೂ ಬದ್ಧನಾಗಿದ್ದು, ಎಲ್ಲರ ಸಹಕಾರ ಬೆಂಬಲ ಮುಂದುವರೆಯಲಿ’ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಮಾತನಾಡಿ, ‘ಚಾರುಲತಾ ಅವರು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ್ದಾರೆ. ಇದರಿಂದ ಹಲವು ಪ್ರಗತಿಪರ ಕೆಲಸಗಳು ಸಾಧ್ಯವಾಗಿವೆ’ ಎಂದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ರೈತ ಮುಖಂಡರಾದ ಭಾಗ್ಯರಾಜ್ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು