ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ನಾಗರಿಕರ ನಿರ್ಲಕ್ಷ್ಯ ಸಲ್ಲ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ
Last Updated 16 ಅಕ್ಟೋಬರ್ 2018, 13:49 IST
ಅಕ್ಷರ ಗಾತ್ರ

ಚಾಮರಾಜನಗರ: ‘ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಹಿರಿಯ ನಾಗರಿಕರನ್ನು ಚೆನ್ನಾಗಿ ನೋಡಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸುವುದುಎಲ್ಲರ ಜವಾಬ್ದಾರಿ. ಅವರನ್ನು ಯಾರೂನಿರ್ಲಕ್ಷಿಸಬಾರದು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮಂಗಳವಾರ ಅಭಿಪ್ರಾಯಪಟ್ಟರು.

ಪಟ್ಟಣದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ನಿವೃತ್ತಿ ಎನ್ನುವುದು ವೃತ್ತಿಗೆ ಮಾತ್ರ. 60 ವರ್ಷ ಮೇಲ್ಪಟ್ಟವರು ವಿಶ್ರಾಂತಿ ಪಡೆಯಲು ಈ ವ್ಯವಸ್ಥೆ ಇದೆ. ಹಿರಿಯರಿಗೆ ಯಾವುದೇ ನಿವೃತ್ತಿ ಇಲ್ಲ. ಇಂದಿಗೂ ವೃದ್ಧರು ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರನ್ನು ನಾವು ಮರೆಯಬಾರದು’ ಎಂದು ಹೇಳಿದರು.

‘ಕಿರಿಯರು ಹಿರಿಯನಾಗರಿಕರಿಗೆ ಗೌರವ ನೀಡುವುದನ್ನು ಕಲಿಯಬೇಕು. ಮೊದಲು ನಾವು ಗೌರವ ಸಲ್ಲಿಸಿದರೆ ಭವಿಷ್ಯದಲ್ಲಿ ನಮಗೆ ಗೌರವ ಸಿಗಲಿದೆ. ಹಾಗಾಗಿ,ಪೋಷಕರು, ಯುವಸಮುದಾಯ ಹಿರಿಯರನ್ನು ಕಾಣುವ ರೀತಿ ಬದಲಾಗಬೇಕಿದೆ’ ಎಂದರು.

‘ಆರೋಗ್ಯದ ಸಮಸ್ಯೆ ಎದುರಾದಾಗ ಮತ್ತೊಬ್ಬರ ಮೇಲೆಅವಲಂಬಿತರಾಗಬೇಕಾಗುತ್ತದೆ. ಆದ್ದರಿಂದ ದೇಹದ ಆರೋಗ್ಯವನ್ನು ಹಿರಿಯರು ಕಾಪಾಡಿಕೊಳ್ಳಬೇಕು. ವ್ಯಾಯಾಮ, ಉತ್ತಮಆಹಾರ ಪದ್ಧತಿ ಮೂಲಕ ಆರೋಗ್ಯ ಕಾಪಾಡಿಕೊಂಡರೆ ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ಕಾರ್ಯಶೀಲರಾಗಬಹುದು’ ಎಂದರು.

ವೃದ್ಧಾಪ್ಯ ವೇತನ:ಹಿರಿಯ ನಾಗರಿಕರು ಮತ್ತೊಬ್ಬರ ಮೇಲೆ ಅವಲಂಬಿತರಾಗದೆ ಜೀವನ ನಡೆಸಿಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಹಾಗೂ ಆರ್ಥಿಕ ಸದೃಢತೆಗಾಗಿ ಸರ್ಕಾರ ಪ್ರತಿ ತಿಂಗಳುವೃದ್ಧಾಪ್ಯ ವೇತನ ನೀಡುವ ವ್ಯವಸ್ಥೆ ಜಾರಿಗೊಳಿಸಿದೆ. ಸರ್ಕಾರದ ಎಲ್ಲ ಯೋಜನೆಗಳ ಪ್ರಯೋಜನವನ್ನು ಹಿರಿಯರು ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ಕುಂದುಕೊರತೆಗಳಿದ್ದರೆ ಹಿರಿಯ ನಾಗರಿಕರ ಸೇವಾ ಕೇಂದ್ರಗಳನ್ನುಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆರೆಹಳ್ಳಿ ನವೀನ್‌ ಮಾತನಾಡಿ, ‘ಸರ್ಕಾರವು ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ಹಾಗೂ ಈಗಾಗಲೇ ಸೌಲಭ್ಯ ಪಡೆಯುತ್ತಿರುವವರು ಹಿರಿಯ ನಾಗರಿಕರಿಗೆ ಮನದಟ್ಟು ಮಾಡಿಕೊಡಬೇಕು.ಇಲ್ಲದಿದ್ದರೆ ಅವರು ಸೌಲಭ್ಯಗಳಿಂದ ‌ವಂಚಿತರಾಗುತ್ತಾರೆ’ ಎಂದರು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಉದ್ಘಾಟಿಸಿದರು. ಉಪಾಧ್ಯಕ್ಷ ಜೆ.ಯೋಗೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ನಾಗರಾಜುಕಮಲ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ದೊಡ್ಡಪ್ಪ ಮೂಲಿಮನೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ತಿರುಮಲೇಶ್ ಇದ್ದರು.

ಗೌರವ ಹಾಗೂ ಪ್ರಶಸ್ತಿ ಪತ್ರ ವಿತರಣೆ

ಕಾರ್ಯಕ್ರಮದಲ್ಲಿ ಜನಪದ ಕಲೆ ವೀರಗಾಸೆಯ ಹಿರಿಯ ಕಲಾವಿದ ಶಿವರುದ್ರಸ್ವಾಮಿಮತ್ತು ಗೊರವರ ಕುಣಿತದ ಹಿರಿಯ ಕಲಾವಿದ ಆರ್.ಎಂ.ಶಿವಮಲ್ಲೇಗೌಡ ಅವರನ್ನು ಸನ್ಮಾನಿಸಲಾಯಿತು.

ಇಲಾಖೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT