ಭಾನುವಾರ, ಸೆಪ್ಟೆಂಬರ್ 19, 2021
24 °C

17 ಮಂದಿಗೆ ಸೋಂಕು, ಒಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 17 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 19 ಮಂದಿ ಸೋಂಕು ಮುಕ್ತರಾಗಿದೆ. ಹಲವು ದಿನಗಳ ನಂತರ ಒಬ್ಬರು ಮೃತಪಟ್ಟಿದ್ದಾರೆ. 

ಸೋಂಕಿತರ ಸಂಖ್ಯೆ 228ಕ್ಕೆ ಏರಿದೆ. ಆರು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 32 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ ಹಾಗೂ ಕೇರ್ ಕೇಂದ್ರಗಳಲ್ಲಿದ್ದಾರೆ. 

ಜಿಲ್ಲೆಯಲ್ಲಿ ಇದುವರೆಗೆ 32,200 ಮಂದಿಗೆ ಸೋಂಕು ತಗುಲಿದೆ. 31,451 ಮಂದಿ ಚೇತರಿಸಿಕೊಂಡಿದ್ದಾರೆ.  

ಶನಿವಾರ 1,583 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,565 ಮಂದಿಯ ವರದಿ ನೆಗೆಟಿವ್ ಬಂದಿವೆ. 18 ಮಂದಿಗೆ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಬೇರೆ ಜಿಲ್ಲೆಗೆ ಸೇರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.