ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾನಗರದಲ್ಲಿ 72 ಹೊಸ ಕೋವಿಡ್‌ ಪ್ರಕರಣ: ಇಬ್ಬರು ಸಾವು, 28 ಮಂದಿ ಗುಣಮುಖ

Last Updated 19 ಸೆಪ್ಟೆಂಬರ್ 2020, 13:55 IST
ಅಕ್ಷರ ಗಾತ್ರ

ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 22 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಒಟ್ಟು ಸೋಂಕಿತರ ಸಂಖ್ಯೆ 65ಕ್ಕೆ ತಲುಪಿದೆ.

ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ನಿವಾಸಿ 63 ವರ್ಷ ವ್ಯಕ್ತಿ ಸೆ.17ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. 18ರಂದು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಮಾದಾಪುರದ 72 ವರ್ಷದ ವೃದ್ಧ 17ರಂದು ಆಸ್ಪತ್ರೆಗೆ ದಾಖಲಾಗಿದ್ದು, 18ರಂದು ನಿಧನರಾಗಿದ್ದಾರೆ.

ಶನಿವಾರದ 72 ಪ್ರಕರಣಗಳೂ ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 3,418 ಪ್ರಕರಣಗಳು ವರದಿಯಾಗಿವೆ. ಗುಣಮುಖರಾದವರ ಸಂಖ್ಯೆ 2,717ಕ್ಕೆ ತಲುಪಿದೆ. 627 ಸಕ್ರಿಯ ಪ್ರಕರಣಗಳು ಇವೆ. 242 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದರೆ, 25 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ 716 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 319, ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ 362, ಟ್ರು ನಾಟ್‌ನಲ್ಲಿ 35 ಪರೀಕ್ಷೆಗಳನ್ನು ನಡೆಸಲಾಗಿದೆ. 646 ವರದಿಗಳು ನೆಗೆಟಿವ್‌ ಬಂದಿವೆ. 70 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT