ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆರು ತಿಂಗಳ ಸಾಧಾರಣ ಶಿಕ್ಷೆ ವಿಧಿಸಿದೆ. 

ಪ್ರಸಾದ್ ಕುಮಾರ್ ಅಲಿಯಾಸ್ ಕೆಂಚ ಶಿಕ್ಷೆಗೆ ಗುರಿಯಾದ ವ್ಯಕ್ತಿ.

2019ರ ಮೇ 27ರಂದು 16 ವರ್ಷದ ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ನಿರ್ಮಾಣ ಹಂತದ ಮನೆಯ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಅಪಹರಣ ಹಾಗೂ ಪೋಕ್ಸೊ ಅಡಿ ದೂರು ದಾಖಲಾಗಿತ್ತು.

ತನಿಖೆ ನಡೆಸಿದ್ದ ಪೊಲೀಸರು, ಆರೋಪಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ಕೃತ್ಯ ಎಸಗಿರುವುದು ಸಾಬೀತಾದ ಕಾರಣ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್‌.ಸುಲ್ತಾನ್‌ಪುರಿ ಅಪರಾಧಿಗೆ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 363 (ಅಪಹರಣ) ಅಡಿಯಲ್ಲಿ ಆರು ತಿಂಗಳ ಸಾದಾ ಸಜೆ, ₹ 10 ಸಾವಿರ ದಂಡ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ 12ರ ಅನುಸಾರ ಆರು ತಿಂಗಳ ಸಾದಾ ಸಜೆ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆಯೂ ಅವರು ಆದೇಶದಲ್ಲಿ ಹೇಳಿದ್ದಾರೆ.

ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಯೋಗೇಶ್ ವಾದ ಮಂಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು