ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ ಉಪಾಧ್ಯಕ್ಷೆಯಾಗಿ ಶಶಿಕಲಾ ಆಯ್ಕೆ

Last Updated 14 ಜುಲೈ 2020, 17:31 IST
ಅಕ್ಷರ ಗಾತ್ರ

ಚಾಮರಾಜನಗರ: ಕಾಂಗ್ರೆಸ್‌ ಸದಸ್ಯೆ ಶಶಿಕಲಾ ಅವರುನಿರೀಕ್ಷೆಯಂತೆ ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತರಾದ ಡಾ. ಜಿ.ಸಿ. ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಿತು.

ಜಿಲ್ಲಾ ಪಂಚಾಯಿತಿಯಲ್ಲಿ ಸ್ಪಷ್ಟ ಬಹುಮತವನ್ನು ಕಾಂಗ್ರೆಸ್ ಹೊಂದಿದ್ದು, ತಾಲ್ಲೂಕಿನ ಅಮಚವಾಡಿ ಕ್ಷೇತ್ರದ ಸದಸ್ಯರಾಗಿರುವ ಶಶಿಕಲಾ ಒಬ್ಬರೇ ನಾಮಪ‍ತ್ರ ಸಲ್ಲಿಸಿದ್ದರು.

ನಾಮಪತ್ರ ಕ್ರಮಬದ್ಧವಾಗಿದ್ದುದರಿಂದ ಶಶಿಕಲಾ ಅವರು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್‌ ಅವರು ಘೋಷಿಸಿದರು.

ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ, ‘ಜಿಲ್ಲೆಗೆ ಬರುವಷ್ಟು ಅನುದಾನವನ್ನು ಬಳಸಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಾದ ಜಲ ಜೀವನ್ ಯೋಜನೆಯಡಿ ಪ್ರತಿಯೊಂದು ಗ್ರಾಮಗಳಿಗೂ ಕುಡಿಯುವ ನೀರನ್ನು ತಲುಪಿಸಲು ಪ್ರಯತ್ನಿಸುತ್ತೇನೆ’ ಎಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿನಿ, ಸದಸ್ಯರು ಹಾಜರಿದ್ದರು.

ಅಭಿನಂದನೆ: ಅವಿರೋಧವಾಗಿ ಆಯ್ಕೆಯಾದ ಶಶಿಕಲಾ ಅವರನ್ನು ಜಿಲ್ಲಾ ಪಂಚಾಯಿತಿ ಸದಸ್ಯರು, ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಂಗ್ರೆಸ್‌ ಮುಖಂಡರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT