ಶನಿವಾರ, ಏಪ್ರಿಲ್ 1, 2023
31 °C

ಚಾಮರಾಜನಗರ, ಯಾದಗಿರಿಯ ವಸತಿ ರಹಿತರಿಗೆ ಮನೆ: ವಸತಿ ಸಚಿವ ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಚಾಮರಾಜನಗರ ಹಾಗೂ ಯಾದಗಿರಿ ಜಿಲ್ಲೆಗಳ ಎಲ್ಲ ವಸತಿ ರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಘೋಷಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ 66ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ' ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 2.50ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. 7000 ಆಶ್ರಯ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಮನೆ ನಿರ್ಮಿಸಿಕೊಂಡಿರುವವರ ಖಾತೆಗೆ ₹2,300 ಕೋಟಿ ಹಣ ಜಮೆ ಮಾಡಲಾಗಿದೆ' ಎಂದರು.

'ನಿವೇಶನ ಯೋಜನೆ ಅಡಿಯಲ್ಲಿ 7000 ಎಕರೆ ಜಮೀನು ಕಾಯ್ದಿರಿಸಲಾಗಿದ್ದು, 2.30 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಉದ್ದೇಶ ಹೊಂದಲಾಗಿದೆ' ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಯೋಜನೆಗಳ ವಿವರಗಳನ್ನೂ ಅವರು ನೀಡಿದರು.

ಭಾಷೆಯ ತೊಟ್ಟಿಲು: 'ಗಡಿ ಜಿಲ್ಲೆಯು ಕನ್ನಡ ನಾಡು‌ನುಡಿಗೆ ತನ್ನದೇ ಆದ ಕೊಡುಗೆ ನೀಡಿದೆ. ಕನ್ನಡದ ವಿಷಯದಲ್ಲಿ ಜಿಲ್ಲೆ ಭಾಷೆಯ ತೊಟ್ಟಿಲು ಇದ್ದಂತೆ. ಪಶ್ಚಿಮದ ಮೂಲೆಹೊಳೆಯಿಂದ ಪೂರ್ವದ ಹೊಗೆನಕಲ್ ವರೆಗಿನ ಪ್ರದೇಶಗಳಲ್ಲಿ ಗಟ್ಟಿ ಕನ್ನಡ ಭಾಷೆ ಮಾತನಾಡುವ ಜನ ಸಮೂಹಗಳಿವೆ' ಎಂದು ಸೋಮಣ್ಣ ಅವರು ಬಣ್ಣಿಸಿದರು.

ಇದಕ್ಕೂ ಮುನ್ನ ಅವರು ಪೊಲೀಸ್, ಅರಣ್ಯ ರಕ್ಷಕ ದಳ, ಗೃಹ ರಕ್ಷಕ ದಳ, ವಿವಿದ ಶಾಲಾ ವಿದ್ಯಾರ್ಥಿಗಳ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ನಗರದ ಜೆಎಸ್ಎಸ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಸೇವಾ ಭಾರತಿ ಶಾಲೆಯ ವಿದ್ಯಾರ್ಥಿಗಳು ನಾಡು‌ನುಡಿ‌ ಸ್ಮರಿಸುವ ಹಾಡುಗಳಿಗೆ ನೃತ್ಯ ಪ್ರದರ್ಶನ‌ ನೀಡಿದರು.

ಇತ್ತೀಚೆಗೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರ ಸಹಿತ ಅವರ ಸಿನಿಮಾ ಹಾಡುಗಳಿಗೆ ಜೆಎಸ್ಎಸ್ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾಧಿಕಾರಿ‌ ಡಾ‌ಎಂ.ಆರ್.ರವಿ, ಜಿ.ಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ ಪಿ ದಿವ್ಯಾಸಾರಾ ಥಾಮಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು