ಬುಧವಾರ, ಮಾರ್ಚ್ 29, 2023
27 °C

ಮಹದೇಶ್ವರ ಬೆಟ್ಟ: 17ರಿಂದ ಶಿವರಾತ್ರಿ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಇದೇ 17ರಿಂದ 21ರವರೆಗೆ ಮಹಾಶಿವರಾತ್ರಿ ಹಾಗೂ ಮಾರ್ಚ್ 19ರಿಂದ 22ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆಯ ಅಂಗವಾಗಿ ವಿಶೇಷ ಉತ್ಸವಗಳು ನಡೆಯಲಿವೆ. 

17ರಂದು ಮಹಾಶಿವರಾತ್ರಿ ಜಾತ್ರೆ ಪ್ರಾರಂಭವಾಗುತ್ತದೆ. 18ರಂದು ಮಹದೇಶ್ವರಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸಾವಾದಿಗಳು, ಜಾಗರಣೆ ಉತ್ಸವ ಜರುಗಲಿವೆ. 19ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು, 20ರಂದು ಅಮಾವಾಸ್ಯೆ, ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ನೆರವೇರಲಿವೆ. 21ರಂದು ಬೆಳಿಗ್ಗೆ 8.20ರಿಂದ 9.10ರವರೆಗೆ ಮಹಾರಥೋತ್ಸವ ನಡೆಯಲಿದೆ. ರಾತ್ರಿ ಅಭಿಷೇಕ ಪೂಜೆ ಮುಗಿದ ನಂತರ ಕೊಂಡೋತ್ಸವ ನಡೆಯಲಿದೆ.

ಮಾರ್ಚ್ 19ರಂದು ಯುಗಾದಿ ಜಾತ್ರೆ ಪ್ರಾರಂಭವಾಗಲಿದೆ. 20ರಂದು ಮಹದೇಶ್ವರಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸಾವಾದಿಗಳು, 21ರಂದು ಅಮಾವಾಸ್ಯೆ, ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ನೆರವೇರಲಿವೆ. 22ರಂದು ಬೆಳಿಗ್ಗೆ 9.50ರಿಂದ 10.30ರವರೆಗೆ ಮಹಾರಥೋತ್ಸವ ಜರುಗಲಿದೆ.

ವಿಶೇಷ ಸೇವೆ ಉತ್ಸವಗಳು ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ನೇತೃತ್ವದಲ್ಲಿ ನೆರವೇರಲಿದೆ ಎಂದು ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.