ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರಾವಣ ಶನಿವಾರ: ಗೋಪಾಲಸ್ವಾಮಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಭಕ್ತರು

Published 10 ಆಗಸ್ಟ್ 2024, 14:31 IST
Last Updated 10 ಆಗಸ್ಟ್ 2024, 14:31 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮೊದಲ ಶ್ರಾವಣ ಶನಿವಾರದಂದು ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು.

ಬೆಂಗಳೂರು, ಮೈಸೂರು, ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮದ ನೂರಾರು ಮಂದಿ ಭಕ್ತರು ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬೆಳಿಗ್ಗೆ 12 ಗಂಟೆ ವೇಳೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ದೊಡ್ಡ ಸರತಿ ಸಾಲು ಕಂಡುಬಂತು. ಗೋವಿಂದ– ಗೋಪಾಲ ಘೋಷಣೆ ಕೂಗಿ ದೇವರಿಗೆ ಭಕ್ತಿ ಸಮರ್ಪಿಸಿದರು.

ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಭಟ್ ಅವರು ಗೋಪಾಲಸ್ವಾಮಿಗೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ, ವಿಶೇಷ ಹೂವುಗಳಿಂದ ಅಲಂಕಾರ ಮಾಡಿ ಮಹಾ ಮಂಗಳಾರತಿ ಮಾಡಿದರು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ತಪ್ಪಲಿನಲ್ಲಿ ಕೆಎಸ್‍ಆರ್‌ಟಿಸಿ ವತಿಯಿಂದ 20ಕ್ಕೂ ಅಧಿಕ ಬಸ್ ವ್ಯವಸ್ಥೆ ಮಾಡಲಾಗಿತ್ತು. ಸ್ವಂತ ವಾಹನದಲ್ಲಿ ಆಗಮಿಸಿದ್ದವರು ತಪ್ಪಲಿನ ಪಾರ್ಕಿಂಗ್‌ನಲ್ಲಿ ನಿಲ್ಲಿಸಿ ಬಸ್‌ನಲ್ಲಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT