ಗುರುವಾರ , ಏಪ್ರಿಲ್ 15, 2021
19 °C

ಸಿದ್ಧಗಂಗಾಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯನ್ನು ನಗರದ ಕರಿನಂಜನಪುರ ರಸ್ತೆಯಲ್ಲಿರುವ ನಿಜಗುಣ ರೆಸಿಡೆನ್ಸಿಯಲ್ಲಿ ಆಚರಿಸಲಾಯಿತು. 

ಸ್ವಾಮೀಜಿ ಅವರ ಭಾವಚಿತ್ರ ಇಟ್ಟು, ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ನಮೋ ಜನ ಚೇತನ ಟ್ರಸ್ಟ್‌ನ ಅಧ್ಯಕ್ಷ ನಿಜಗುಣರಾಜು ಅವರು, ‘ನಡೆದಾಡುವ ದೇವರು, ಅಭಿನವ ಬಸವಣ್ಣ ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿ ಅವರು 111 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ, ಜನ ಮಾನಸದಲ್ಲಿ ಉಳಿದಿದ್ದಾರೆ’ ಎಂದರು. 

‘ಮಹಾನ್ ತಪಸ್ಸಿನ ಶಕ್ತಿ ಹೊಂದಿದ್ದ ಶ್ರೀಗಳಳು ವಿಶ್ವಕ್ಕೆ ಮಾದರಿಯಾದ ದಾಸೋಹವನ್ನು ನೀಡಿದರು.  ಅವರ ದರ್ಶನ ಹಾಗೂ ಆಶೀರ್ವಾದ ಪಡೆದ ನಾವು ಪುಣ್ಯವಂತರು’ ಎಂದರು. 

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಸಿ.ಎಂ. ಆಶಾ, ಸದಸ್ಯ ಶಿವರಾಜು, ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ಡಾ. ಪರಮೇಶ್ವರಪ್ಪ, ಮುಖಂಡರಾದ ಶಿವಕುಮಾರಸ್ವಾಮಿ, ಮಹದೇವಪ್ರಸಾದ್, ಮಂಡಲದ ಅಧ್ಯಕ್ಷ ಪ್ರಶಾಂತ್, ಪುಣ್ಯದಹುಂಡಿ ಸತೀಶ್, ಪುಣಜನೂರು ಚಂದ್ರಶೇಖರ್, ಹಂಡ್ರಕಳ್ಳಿ ನಾಗಣ್ಣ, ಕಾವುದವಾಡಿ ಗುರು, ಕಾಳನಹುಂಡಿ ಮಲ್ಲಿಕ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು