ಗುರುವಾರ , ಸೆಪ್ಟೆಂಬರ್ 23, 2021
22 °C

ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅರ್ಥಪೂರ್ಣ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ.ಎಂ, ಉಪಧ್ಯಕ್ಷೆ ಶಶಿಕಲಾ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಬಿ.ಶಾಂತಮೂರ್ತಿ ಕುಲಗಾಣ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಅವರು ದೀಪ ಬೆಳಗಿಸಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ನಂತರ ಮಾತನಾಡಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ ಅವರು, ‘ಸಿದ್ದರಾಮೇಶ್ವರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ. 12ನೇ ಶತಮಾನದಲ್ಲಿ ಸಿದ್ದರಾಮೇಶ್ವರರು ಜನರನ್ನು ಎಚ್ಚರಿಸುವ ಕೆಲಸ ಮಾಡಿದರು. ಸಮಾಜದಲ್ಲಿ ಬೇರೂರಿದ್ದ ಅನಿಷ್ಟ ಪಿಡುಗುಗಳನ್ನು ತೊಲಗಿಸಲು ಪ್ರಯತ್ನಿಸಿದರು. 68 ಸಾವಿರಕ್ಕೂ ಹೆಚ್ಚು ವಚನಗಳನ್ನು ಇವರು ರಚನೆ ಮಾಡಿರುವುದಾಗಿ ತಿಳಿದು ಬಂದಿದೆ’ ಎಂದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರು ಮಾತನಾಡಿ, ‘12ನೇ ಶತಮಾನದಲ್ಲಿದ್ದ ಬಹಳಷ್ಟು ಪಿಡುಗುಗಳು, ಅನಿಷ್ಟ ಪದ್ಧತಿಗಳ ವಿರುದ್ಧ  ಹೋರಾಡಿದ ವಚನ ಚಳುವಳಿಕಾರರಲ್ಲಿ ಸಿದ್ದರಾಮೇಶ್ವರರು ಕೂಡ ಪ್ರಮುಖರು .ಇಂತಹ ಮಹಾನ್ ಶಿವಯೋಗಿಗಳ ಜಯಂತಿಯನ್ನು ಒಂದು ಜಾತಿಗೆ ಸೀಮಿತ ಮಾಡದೇ ಇಡೀ ಸಮಾಜಕ್ಕೆ ಅವರ ಕೊಡುಗೆ ಮಾದರಿಯಾಗಬೇಕು’ ಎಂದು ಹೇಳಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ. ಶಾಂತಮೂರ್ತಿ ಕುಲಗಾಣ ಅವರು ಮಾತನಾಡಿದರು. ಜಾನಪದ ಗಾಯಕರರಾದ ಸಿ.ಎಂ. ನರಸಿಂಹಮೂರ್ತಿ ಅವರು ವಿವಿಧ ವಚನಗಳನ್ನು ಹಾಡಿ ಗಮನ ಸೆಳೆದರು. 

ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ರಾಜು, ಕನ್ನಡ ಪರ ಸಂಘಟನೆಗಳ ಮುಖಂಡರಾದ ನಿಜದ್ವನಿ ಗೋವಿಂದರಾಜು, ಚಾ.ರಂ. ಶ್ರೀನಿವಾಸ್‍ಗೌಡ, ಬೋವಿ ಸಮಾಜದ ಮುಖಂಡರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.