ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 12 ಮಂದಿ ಗುಣಮುಖ, 6 ಹೊಸ ಪ್ರಕರಣ

Last Updated 15 ನವೆಂಬರ್ 2020, 15:15 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 12 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಆರು ಹೊಸ ಪ್ರಕರಣಗಳು ದೃಢಪಟ್ಟಿವೆ. ಸಾವು ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 6,184ಕ್ಕೆ ಏರಿದೆ. 5,930 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ ಬೇರೆ ಕಾರಣಗಳಿಂದ 19 ಜನರು ಮೃತಪಟ್ಟಿದ್ದಾರೆ.

ಸದ್ಯ 127 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 27 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 86 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಭಾನುವಾರ 1,207 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಐದು ವರದಿಗಳು ಬಿಟ್ಟು ಉಳಿದೆಲ್ಲವೂ ನೆಗೆಟಿವ್‌ ಬಂದಿವೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಸೋಂಕಿತ ಆರು ಮಂದಿಯಲ್ಲಿಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ತಾಲ್ಲೂಕಿನಿಂದ ತಲಾ ಇಬ್ಬರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT