ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 19 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಐದು ಹೊಸ ಪ್ರಕರಣಗಳು ದೃಢಪಟ್ಟಿವೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕು ಮುಕ್ತರಾದವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿದಿದೆ. ಸದ್ಯ 67 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 45 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 11 ಮಂದಿ ಇದ್ದಾರೆ.

ಸೋಮವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 6,328ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,133ಕ್ಕೆ ತಲುಪಿದೆ.

ಕೋವಿಡ್ ಕಾರಣದಿಂದ ಇದುವರೆಗೆ 108 ಮಂದಿ ಹಾಗೂ ಇತರ ಅನಾರೋಗ್ಯಗಳಿಂದಾಗಿ 20 ಮಂದಿ ಮೃತಪಟ್ಟಿದ್ದಾರೆ.

ಸೋಮವಾರ 423 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 418 ಮಂದಿಯ ವರದಿ ನೆಗೆಟಿವ್ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.