ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ 67 ಸಕ್ರಿಯ ಪ್ರಕರಣಗಳು

Last Updated 8 ಜನವರಿ 2021, 6:07 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಎಂಟು ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಒಂಬತ್ತು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸದ್ಯ 67 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಮಂದಿ 44 ಹೋಂ ಐಸೊಲೇಷನ್‌ಲ್ಲಿದ್ದಾರೆ. ಒಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,814ಕ್ಕೆ ಏರಿದೆ. 6,616 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಗುರುವಾರ 1,315 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,310 ಮಂದಿಯ ವರದಿ ನೆಗೆಟಿವ್‌ ಬಂದಿವೆ. ಐವರಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣ ಮೈಸೂರಿನಲ್ಲಿ ಮತ್ತು ಒಂದು ಪ್ರಕರಣ ಚಿಕ್ಕಮಗಳೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT