ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 62ಕ್ಕೆ ಇಳಿದ ಸಕ್ರಿಯ ಪ್ರಕರಣಗಳು

Last Updated 8 ಜನವರಿ 2021, 16:31 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಆರು ಕೋವಿಡ್‌ ಪ್ರ‌ಕರಣಗಳು ದೃಢಪಟ್ಟಿವೆ. 11 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 62ಕ್ಕೆ ಇಳಿದಿದೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿರುವ ಸೋಂಕಿತರಲ್ಲಿ 43 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಯಾರೊಬ್ಬರೂ ಐಸಿಯುನಲ್ಲಿ ಇಲ್ಲ.

ಒಟ್ಟು ಪ್ರಕರಣಗಳ ಸಂಖ್ಯೆ 6,820ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,627ಕ್ಕೆ ತಲುಪಿದೆ. ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ.

ಶುಕ್ರವಾರ 1,261 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,256 ವರದಿಗಳು ನೆಗೆಟಿವ್‌ ಬಂದಿವೆ. ಐದು ಮಂದಿಗೆ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT